ಸೌದಿ ಅರೇಬಿಯಾ: ಇಲ್ಲಿನ ಖಮೀಸ್ ಮುಶೈತ್ ನಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರು ಮೂಲದ ಸಮೀವುಲ್ಲಾ ಖಾನ್ ಎಂಬವರು ಅ.29ರಂದು ನಿಧನರಾಗಿದ್ದರು. ಈ ವಿಷಯ ತಿಳಿದು ಕೆ. ಸಿ. ಎಫ್ ಖಮೀಸ್ ಮುಶೈತ್ ಸೆಕ್ಟರ್ ಅಧ್ಯಕ್ಷ ಅಬ್ದುಲ್ ರಝಾಕ್ ಬನ್ನೂರು ರವರು ತಕ್ಷಣ ಕಾರ್ಯಪ್ರವೃತ್ತರಾಗಿ ಮರಣೋತ್ತರ ಕ್ರಿಯೆಗೆ ಅಗತ್ಯವಿರುವ ಎಲ್ಲಾ ದಾಖಲೆ ಪತ್ರಗಳನ್ನು ಕ್ರೋಢೀಕರಿಸಿ, ಬೇಕಾದ ಕಚೇರಿಗಳಿಗೆ ತಲುಪಿಸಿ ದಫನ ಕಾರ್ಯವನ್ನು ನಡೆಸಲು ಸಿದ್ಧತೆಯನ್ನು ಮಾಡಿದರು.
ನ.1ರಂದು ಅಸರ್ ನಮಾಜಿನ ಬಳಿಕ ಖಮೀಸ್ ಮುಶೈತ್ ನ ಖಬರಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕೆ. ಸಿ. ಎಫ್‌ನ ಅಬೂಬಕ್ಕರ್ ಪುರಷರಕಟ್ಟೆ, ಖಾಲೀದ್ ಕಬಕ ಸಹಿತ ಹಲವು ಕಾರ್ಯಕರ್ತರು ಹಾಗೂ ಮೃತರ ಕುಟುಂಬಸ್ಥರು ಉಪಸ್ಥಿತರಿದ್ದರು.
ಲಾಕ್‌ಡೌನ್ ಸಂದರ್ಭಗಳಲ್ಲಿ ಕೆ.ಸಿ.ಎಫ್ ಖಮೀಸ್ ಮುಶೈತ್ ಸೆಕ್ಟರ್‌ನ ಅಧ್ಯಕ್ಷ ಅಬ್ದುಲ್ ರಝಾಕ್ ಬನ್ನೂರು ರವರ ನೇತೃತ್ವದಲ್ಲಿ ಹಲವಾರು ವಿಶೇಷ ಸಾಮಾಜಿಕ ಸೇವೆ, ಸಾಂತ್ವನ ಕಾರ್ಯಗಳು ನಡೆಯುತ್ತಲೆ ಬರುತ್ತಿದ್ದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿವೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ