janadhvani

Kannada Online News Paper

ಡಿ.22 ಮತ್ತು 27 ರಂದು ಗ್ರಾಮ ಪಂಚಾಯತಿ ಚುನಾವಣೆ

ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಸೋಮವಾರ ಸುದ್ದಿಗೋಷ್ಠಿ ನಡೆಸಿರುವ ಚುನಾವಣಾ ಆಯೋಗ ಲೋಕಲ್ ಫೈಟ್‌ಗೆ ಎರಡು ಹಂತದಲ್ಲಿ ದಿನಾಂಕ ನಿಗದಿಗೊಳಿಸಿದ್ದಾರೆ. ಡಿಸೆಂಬರ್ 22 ಮತ್ತು 27 ರಂದು ಗ್ರಾಪಂ ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ.

ಒಟ್ಟು 5,762 ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ 2,930 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆದರೆ, ಎರಡನೇ ಹಂತದಲ್ಲಿ 2,832 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆಯಲಿದೆ. ಬೀದರ್ ಜಿಲ್ಲೆ ಹೊರತುಪಡಿಸಿ ಉಳಿದ ಕಡೆ ಮತಪತ್ರಗಳ ಮೂಲಕ ಚುನಾವಣೆ ನಡೆಯಲಿದೆ.