ಈ ಹಿಂದೆ, ಜನವರಿ 1 ರಿಂದ ದೇಶದಲ್ಲಿ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ಪ್ರಾರಂಭಿಸಲಾಗುವುದು ಮತ್ತು ಈ ದಿನಾಂಕಕ್ಕೆ 30 ದಿನಗಳ ಮುಂಚಿತವಾಗಿ ವಿವರಗಳನ್ನು ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದರು
ರಿಯಾದ್, ಡಿ.2: ಅಂತರರಾಷ್ಟ್ರೀಯ ವಿಮಾನಯಾನ ನಿಷೇಧವನ್ನು ತೆಗೆದುಹಾಕುವ ಕುರಿತ ಘೋಷಣೆ ವಿಳಂಬವಾಗಲಿದೆ ಎಂದು ಸೌದಿ ಆಂತರಿಕ ಸಚಿವಾಲಯ ಪ್ರಕಟಿಸಿದೆ. ನಿಷೇಧವನ್ನು ತೆಗೆದುಹಾಕುವ ಬಗ್ಗೆ ಇಂದು ನಿರ್ಣಾಯಕ ಪ್ರಕಟಣೆ ನೀಡಲಾಗುವುದು ಎಂಬ ಸೂಚನೆಗಳಿತ್ತು. ಇದರನ್ವಯ ಗೃಹ ಸಚಿವಾಲಯವು ಇಂದು ಸ್ಪಷ್ಟೀಕರಿಸಿದೆ.
ಈ ಹಿಂದೆ, ಜನವರಿ 1 ರಿಂದ ದೇಶದಲ್ಲಿ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ಪ್ರಾರಂಭಿಸಲಾಗುವುದು ಮತ್ತು ಈ ದಿನಾಂಕಕ್ಕೆ 30 ದಿನಗಳ ಮುಂಚಿತವಾಗಿ ವಿವರಗಳನ್ನು ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದರು. ಕೋವಿಡ್ ಪ್ರಕರಣಗಳನ್ನು ಗಣನೆಗೆ ತೆಗೆದುಕೊಂಡು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆ ಸಮಯದಲ್ಲಿ ತಿಳಿಸಲಾಗಿತ್ತು.
ಆದರೆ, ಇದೀಗ ಆಂತಿಮ ಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಗೃಹ ಸಚಿವಾಲಯದ ಹೊಸ ಪ್ರಕಟಣೆಯಲ್ಲಿ ತಿಳಿಸಿದೆ. ಅಂತರರಾಷ್ಟ್ರೀಯ ಪ್ರಯಾಣವನ್ನು ಪ್ರಸ್ತುತ ವಿಶೇಷ ರಿಯಾಯಿತಿ ವಿಭಾಗಗಳಿಗೆ ಸೀಮಿತಗೊಳಿಸಲಾಗಿದೆ.
ಸೆಪ್ಟೆಂಬರ್ನಲ್ಲಿ, ಸೌದಿ ಅರೇಬಿಯಾ ತನ್ನ ವಿಮಾನ ಪ್ರಯಾಣ ನಿಷೇಧವನ್ನು ಭಾಗಶಃ ತೆಗೆದುಹಾಕಿತು. ಭಾರತವನ್ನು ಹೊರತುಪಡಿಸಿ ಎಲ್ಲಾ ಸ್ಥಳಗಳಿಗೆ ಸೇವೆಗಳನ್ನು ಭಾಗಶಃ ಪುನರಾರಂಭಿಸಿದೆ. ಆದರೆ, ಜನವರಿಯಲ್ಲಿ ಪೂರ್ಣ ಸೇವೆಯನ್ನು ಪುನರಾರಂಭಿಸುವುದಾಗಿಯೂ, ಡಿಸೆಂಬರ್‌ನಲ್ಲಿ ಅದರ ದಿನಾಂಕವನ್ನು ಪ್ರಕಟಿಸುವುದಾಗಿ ಸೌದಿ ಅರೇಬಿಯಾ ತಿಳಿಸಿತ್ತು. ಈ ನಿಟ್ಟಿನಲ್ಲಿ ಆಂತರಿಕ ಸಚಿವಾಲಯವು ಇಂದು ವಿಮಾನ ಹಾರಾಟದ ನಿಖರವಾದ ದಿನಾಂಕವನ್ನು ಪ್ರಕಟಿಸಲಿದೆ ಎಂದು ಸೌದಿ ಅರೇಬಿಯಾದ ಸ್ಥಳೀಯ ಮಾಧ್ಯಮಗಳು ನಿನ್ನೆ ವರದಿ ಮಾಡಿತ್ತು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ