ಮುಲ್ಕಿ,ಡಿ. 6: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಇಂದು ಬೆಳಿಗ್ಗೆ ಟೆಂಪೋ ಡಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ.
ಹಳೆಯಂಗಡಿ ಬಸ್ ನಿಲ್ದಾಣ ಬಳಿಯ ನಿವಾಸಿಗಳಾದ ತಾಯಿ ಸುಖಲತಾ(44) ಅವರ ಮಗ ಚಿರಾಗ್(10) ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ಉಡುಪಿ ಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಹಳೆಯಂಗಡಿ ಸಮೀಪಿಸುತ್ತಿದಂತೆಯೇ ಚಾಲಕನ ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಡಿಕ್ಕಿ ಹೊಡೆದು ಬಳಿಕ ಟೆಂಪೋ ಡಿವೈಡರ್ ಮೇಲೇರಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿತ್ತು.
ಗಂಭೀರ ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ತಾಯಿ ಸುಖಲತಾ (44) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಗ ಚಿರಾಗ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ.
ಅಪಘಾತದಿಂದ ಚಾಲಕ ಪವಾಡಸದೃಶ ಪಾರಾಗಿದ್ದ. ಮೃತ ಸುಖಲತಾ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದು, ಹಳೆಯಂಗಡಿಯಲ್ಲಿ ನೆಲೆಸಿದ್ದಾರೆ. ಮಗ ಚಿರಾಗ್ ಮುಲ್ಕಿ ವ್ಯಾಸ ಮಹರ್ಷಿ ಶಾಲೆಯ ವಿದ್ಯಾರ್ಥಿ. ಮೃತ ಮಹಿಳೆಯ ಪತಿ ಕಾಪುವಿನಲ್ಲಿ ನೆಲೆಸಿದ್ದು, ಮನೆಯವರ ರೋದನ ಮುಗಿಲು ಮುಟ್ಟಿದೆ. ತಾಯಿಗೆ ಅನಾರೋಗ್ಯದ ನಿಮಿತ್ತ ಹಳೆಯಂಗಡಿಯಲ್ಲಿ ಸುಖಲತಾ ನೆಲೆಸಿದ್ದರು. ಸುರತ್ಕಲ್ ಟ್ರಾಫಿಕ್ ಪೊಲೀಸರು ಟೆಂಪೋ ಚಾಲಕನನ್ನು ಬಂಧಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್