ಬೆಂಗಳೂರು: ‘ಭಾರತ್ ನೆಟ್ ಸಹಯೋಗದಲ್ಲಿ ಮುಂದಿನ ದಿನಗಳಲ್ಲಿ ಎಲ್ಲ ಸರ್ಕಾರಿ ಶಾಲೆಗಳಿಗೆ ಕೇಬಲ್ ಮೂಲಕ ಹೈ ಸ್ಪೀಡ್ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಯುತ್ತಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
‘ಕೋವಿಡ್ ಸೃಷ್ಟಿಸಿರುವ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ತಂತ್ರಜ್ಞಾನ ಆಧಾರಿತ ಕಲಿಕೆಗೆ ವಿಶೇಷ ಒತ್ತು ನೀಡುವುದು ಅನಿವಾರ್ಯವಾಗಿದೆ. ಹೀಗಾಗಿ, ಈ ಬಗ್ಗೆ ಸಂಬಂಧಿಸಿದ ಇಲಾಖೆಯೊಂದಿಗೆ ಪ್ರಾಥಮಿಕ ಚರ್ಚೆ ನಡೆಸಲಾಗಿದೆ. ಮೊದಲ ಹಂತದಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಮುಂದಿನ ಒಂದು ವರ್ಷದೊಳಗೆ ಸಾಕಾರವಾಗುವ ನಿರೀಕ್ಷೆ ಇದೆ’ ಎಂದಿದ್ದಾರೆ.
‘ಹೈಕೋರ್ಟ್ ಅಪೇಕ್ಷೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿಯಲ್ಲಿ ಮಕ್ಕಳಿಗೆ ಬೇಳೆ ಕಾಳುಗಳನ್ನು ನೀಡುವ ಕಾರ್ಯಕ್ರಮ ಮುಂದುವರಿಯಲಿದ್ದು, ಕೋವಿಡ್ ಕಾರಣಕ್ಕೆ ಈ ಸಾಲಿನಲ್ಲಿ ಶಾಲಾವರಣದಲ್ಲಿ ಆಹಾರವನ್ನು ತಯಾರಿಸುವ ಕಾರ್ಯಕ್ರಮ ಇರುವುದಿಲ್ಲ’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
‘ಖಾಸಗಿ ಶಾಲೆಗಳು ಪೋಷಕರ ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕು. ಅವರ ಹಂತದಲ್ಲಿ ಕಡ್ಡಾಯವಾಗಿ ಪೋಷಕರ ಸಭೆ ನಡೆಸಿ ಶುಲ್ಕ ಮೊತ್ತ ನಿರ್ಧರಿಸುವ ಕ್ರಮಕ್ಕೆ ಮುಂದಾಗಬೇಕು. ಖಾಸಗಿ ಶಾಲಾ ಸಂಘಟನೆಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಈ ಕುರಿತಂತೆ ವಿಸ್ತ್ರತ ಚರ್ಚೆ ನಡೆಸಿ ತಿಳಿಸಲು ನಿರ್ದೇಶನ ನೀಡಿದ್ದೇನೆ’ ಎಂದೂ ಅವರು ಹೇಳಿದ್ದಾರೆ
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ