ರಿಯಾದ್: ದೇಶದಲ್ಲಿರುವ ವಿದೇಶಿ ಕಾರ್ಮಿಕರು ತಮ್ಮ ವಾಸಸ್ಥಳವನ್ನು ನೋಂದಾಯಿಸದಿದ್ದಲ್ಲಿ ಇಕಾಮಾವನ್ನು ನವೀಕರಿಸಲಾಗುವುದಿಲ್ಲ ಎಂದು ಸೌದಿ ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿದೆ. ಕಾರ್ಮಿಕರ ವಸತಿ ಕೇಂದ್ರವನ್ನು ಈಜಾರ್ ಪೋರ್ಟಲ್ ಮೂಲಕ ನೋಂದಾಯಿಸುವಂತೆ ಸಚಿವಾಲಯ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.
ಸಚಿವಾಲಯವು ತನ್ನ ಹಿಡಿತವನ್ನು ಬಿಗಿಗೊಳಿಸುತ್ತಿದ್ದಂತೆ, ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ಇಜಾರ್ ದಾಖಲೆಗಳನ್ನು ತಯಾರಿಸಲು ಸೂಚನೆ ನೀಡಿದೆ. ಸೌದಿ ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯವು ಎಚ್ಚರಿಕೆಯನ್ನು ಪುನರಾವರ್ತಿಸಿದೆ.
ದೇಶದಲ್ಲಿ ಉಳಿದುಕೊಂಡಿರುವ ವಿದೇಶಿ ಕಾರ್ಮಿಕರ ವಸತಿ ಕೇಂದ್ರಗಳನ್ನು ಇಜಾರ್ ಪೋರ್ಟಲ್ ಮೂಲಕ ಸಂಪರ್ಕಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಿರ್ದೇಶಿಸಲಾಗಿದೆ. ಖಾಸಗಿ ಕಟ್ಟಡಗಳ ನಿವಾಸಿಗಳು ಕಟ್ಟಡ ಮಾಲೀಕರೊಂದಿಗೆ ಈಜಾರ್ ಪೋರ್ಟಲ್ ಮೂಲಕ ಒಪ್ಪಂದವನ್ನು ನೋಂದಾಯಿಸಿಕೊಳ್ಳಬೇಕು. ಇದನ್ನು ಕಾರ್ಮಿಕರ ಇಕಾಮಾಕ್ಕೂ ಲಿಂಕ್ ಮಾಡಲಾಗುತ್ತದೆ.
ಕಾರ್ಯವಿಧಾನವನ್ನು ಪೂರ್ಣಗೊಳಿಸದ ವಿದೇಶಿಯರಿಗೆ ಇಕಾಮಾವನ್ನು ನೀಡಲು ಅಥವಾ ನವೀಕರಿಸಲು ಅನುಮತಿಸುವುದಿಲ್ಲ ಎಂದು ಸಚಿವಾಲಯ ಹೇಳಿದೆ. ಜನವರಿ 1 ರಿಂದ ಕಾನೂನು ಜಾರಿಗೆ ಬರಲಿದೆ ಎಂದು ಸಚಿವಾಲಯ ಈ ಹಿಂದೆ ತಿಳಿಸಿತ್ತು. ಇದಕ್ಕೂ ಮುನ್ನ ಸಚಿವಾಲಯ ಎಚ್ಚರಿಕೆ ಪುನರಾವರ್ತಿಸಿದೆ. ನಿವಾಸ ಕೇಂದ್ರವನ್ನು ಈಜಾರ್ ನೊಂದಿಗೆ ಸಂಪರ್ಕಿಸಿರುವ ದಾಖಲೆಗಳನ್ನು ಸಲ್ಲಿಸುವಂತೆ ಸುತ್ತೋಲೆ ನೀಡಲಾಗಿದೆ. ಈಜಾರ್ ನೋಂದಣಿ ಯೋಜನೆಯನ್ನು ದೇಶದಲ್ಲಿ ಮೊದಲ ಬಾರಿಗೆ 2018 ರಲ್ಲಿ ಪ್ರಾರಂಭಿಸಲಾಯಿತು.
















ಇನ್ನಷ್ಟು ಸುದ್ದಿಗಳು
ವಲಸಿಗರಿಗೆ ಶುಭ ಸುದ್ದಿ: ಜಿದ್ದಾ–ಕೋಝಿಕ್ಕೋಡ್ ನಡುವೆ ಫ್ಲೈನಾಸ್ ನೇರ ವಿಮಾನ ಸೇವೆ ಆರಂಭ
ರಿಯಾದ್ ವಿಮಾನ ನಿಲ್ದಾಣ ಬಂದ್: ಪರ್ಯಾಯ ಪ್ರಯಾಣ ಮಾರ್ಗದಲ್ಲೂ ಟಿಕೆಟ್ ದರ ಏರಿಕೆ
ಸೌದಿ: ಸಿಲುಕಿರುವ ಯಾತ್ರಿಕರ ವಾಪಸಾತಿಗೆ ರಾಯಭಾರ ಕಚೇರಿ ತೀವ್ರ ಕಾರ್ಯಾಚರಣೆ
ಯುಎಇ : ನಾಲ್ಕು ಪಾಸ್ಪೋರ್ಟ್ ಸೇವಾ ಕೇಂದ್ರಗಳು ಇಂದಿನಿಂದ ಸ್ಥಗಿತ- ರಾಯಭಾರ ಕಚೇರಿ
ಉಮ್ರಾ ಯಾತ್ರಿಕರ ವಾಪಸಾತಿಗೆ ಪರ್ಯಾಯ ವಿಮಾನ ವ್ಯವಸ್ಥೆ ಕಲ್ಪಿಸಬೇಕು- ರಾಯಭಾರ ಕಚೇರಿ
ರಿಯಾದ್, ಜಿದ್ದಾ ವಿಮಾನ ಸೇವೆಗಳು ಅಕ್ಟೋಬರ್ 27ರವರೆಗೆ ಸ್ಥಗಿತ
ಧರ್ಮ ನಿಂದನೆ ದೂರು: ಯುವಕನ ಮರಣದಂಡನೆಯನ್ನು ರದ್ದುಗೊಳಿಸಿದ ಸೌದಿ ಸುಪ್ರೀಂ ಕೋರ್ಟ್
ಸೌದಿ ವಿಮಾನ ಸೇವೆ ಸ್ಥಗಿತ: ವೀಸಾ ಅವಧಿ ಮೀರಿದವರಿಗೆ ದಂಡವಿಲ್ಲದೆ ನಿರ್ಗಮನಕ್ಕೆ ಅವಕಾಶ- ಭಾರತೀಯ ರಾಯಭಾರ ಕಚೇರಿ
ವಿಮಾನ ನಿಲ್ದಾಣದ ಮೇಲೆ ದಾಳಿ: ಉಮ್ರಾಗೆ ಬಂದಿದ್ದ ಬಾಂಗ್ಲಾದೇಶದ ಶಿಕ್ಷಕನಿಗೆ ದಾರುಣ ಅಂತ್ಯ
ರಿಯಾದ್ ವಿಮಾನ ನಿಲ್ದಾಣ ದಾಳಿ: ಗಾಯಗೊಂಡವರಲ್ಲಿ 11 ಮಂದಿ ಭಾರತೀಯರು- ಭಾರತೀಯ ರಾಯಭಾರ ಕಚೇರಿ