ಕುವೈತ್ ಸಿಟಿ,ಜ.2: ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇಂದಿನಿಂದ (ಜನವರಿ 2) ಕಾರ್ಯನಿರ್ವಹಿಸಲಿದೆ. ಕಟ್ಟುನಿಟ್ಟಿನ ನಿಯಂತ್ರಣಗಳೊಂದಿಗೆ ಸೇವೆಯನ್ನು ಪುನರಾರಂಭಿಸುವುದಾಗಿ ನಾಗರಿಕ ವಿಮಾನಯಾನ ಸಚಿವಾಲಯ ಪ್ರಕಟಿಸಿದೆ.
ಆದರೆ ನೇರ ಪ್ರವೇಶ ನಿಷೇಧ ಹೊಂದಿರುವ 35 ದೇಶಗಳ ಮೇಲಿನ ನಿಷೇಧವು ಜಾರಿಯಲ್ಲಿರುತ್ತದೆ.ಯುಕೆ ಯಲ್ಲಿ ರೂಪಾಂತರಗೊಂಡ ಕೊರೋನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ವಿಮಾನಯಾನಗಳನ್ನು ಸ್ಥಗಿತಗೊಳಿಸಲಾಗಿತ್ತು.
ಆರೋಗ್ಯ ಸಚಿವಾಲಯದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ನಾಗರಿಕ ವಿಮಾನಯಾನ ಸಚಿವಾಲಯದ ಉಪ ಮಹಾನಿರ್ದೇಶಕ ಸಾಲಿಹ್ ಅಲ್-ಫತ್ತಾಹ್ ಮನವಿ ಮಾಡಿದ್ದಾರೆ.
ವಿದೇಶದಿಂದ ಹಿಂದಿರುಗಿದ ಕೋವಿಡ್ ರೋಗಿಗಳಿಗೆ ವಿಶೇಷ ಸಂಪರ್ಕತಡೆಯನ್ನು ನೀಡಲು ಸರ್ಕಾರಿ ಸಂಸ್ಥೆ ಚಿಂತನೆ ನಡೆಸಿದೆ. ಆರೋಗ್ಯ ಸಚಿವಾಲಯದ ಸೂಚನೆಯ ಮೇರೆಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ