ಮಂಗಳೂರು: ಉಳ್ಳಾಲ ತೊಕ್ಕೊಟ್ಟು ಒಳ ಪೇಟೆಯಲ್ಲಿ ನಿನ್ನೆ ದುಷ್ಕರ್ಮಿಗಳು ಮಾಂಸ ವ್ಯಾಪಾರಿಗಳ ಅಂಗಡಿ ಮುಂಗಟ್ಟುವಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿರುವುದರ ಹಿಂದೆ ಮತೀಯ ಉದ್ವಿಗ್ನತೆ ಸೃಷ್ಟಿಸುವ ಸ್ಪಷ್ಟ ಉದ್ದೇಶ ಎದ್ದು ಕಾಣುತ್ತಿದೆ ಎಂದು ಮುಸ್ಲಿಮ್ ಒಕ್ಕೂಟ ಆರೋಪಿಸಿದೆ.
ಮುಸ್ಲಿಮ್ ಅಲ್ಪ ಸಂಖ್ಯಾತ ಬಾಹುಳ್ಯವಾದ ಮಂಗಳೂರು ವಿಧಾನ ಸಭಾ ಕ್ಷೇತ್ರದಿಂದಲೇ, ಮತೀಯ ಉದ್ವಿಗ್ನತೆಗೆ ನಾಂದಿ ಹಾಡುವ ಪ್ರಯತ್ನ ಇದಾಗಿದೆ. ಇತ್ತೀಚೆಗಿನ ಕಲ್ಲಡ್ಕ ಭಟ್ಟರ ಪದ ಬಳಕೆ
‘ಉಳ್ಳಾಲ ಪಾಕಿಸ್ತಾನ’ ದ ಮುಂದುವರಿಕೆಯ ಭಾಗವಾಗಿ ನಿನ್ನೆಯ ಅಂಗಡಿ ಸುಡುವಿಕೆ ಘಟನೆ ನಡೆದಿದೆ.
ಈ ದುಷ್ಕೃತ್ಯವನ್ನು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ. ಕೋಮು ಗಲಭೆ ಸ್ರಷ್ಟಿಸಲು ಪ್ರಯತ್ನಿಸುತ್ತಿರುವ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮತ್ತು ಮಾಂಸ ವ್ಯಾಪಾರಿಗಳಿಗೆ ನಷ್ಟ ಪರಿಹಾರ ನೀಡಿ ಅಲ್ಲಿ ನಿರ್ಭೀತಿಯಿಂದ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಬೇಕೆಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮಾಜಿ ಮೇಯರ್ ಕೆ.ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ದೇಶದ ಪ್ರಜ್ಞಾವಂತ ಭಾರತೀಯರು, ದುಷ್ಕರ್ಮಿಗಳ ಇಂತಹ ಸರ್ವ ಷಡ್ಯಂತ್ರದ ಬಗ್ಗೆ ಬಲ್ಲವರಾಗಿದ್ದಾರೆ. ಮಾಂಸಾಹಾರದ ಬಗ್ಗೆ ಮುಸ್ಲಿಮರಿಗಿಂತ ಮುಸ್ಲಿಮೇತರ ಜನ ಪ್ರತಿನಿಧಿಗಳು ಹೇಳಿಕೆ, ಪ್ರತಿ ಹೇಳಿಕೆ ನೀಡುತ್ತಿದ್ದು , ಮುಸ್ಲಿಮೇತರ ಮುಗ್ದ ಜನರನ್ನು ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವ ಕಾಲ ಎಂದೋ ಕಳೆದು ಹೋಗಿದೆ ಎಂದು ಅಶ್ರಫ್ ನೆನಪಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್