ಬೆಂಗಳೂರು: ಜಾನುವಾರು ವಧೆ ತಡೆಗಟ್ಟುವಿಕೆ ಮತ್ತು ಗೋಹತ್ಯೆ ನಿಷೇಧ ಕಾನೂನಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಇತ್ತೀಚೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ಆರಿಫ್ ಜಮೀಲ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗುದಂ ಅವರನ್ನು ಒಳಗೊಂಡ ಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಗೋಹತ್ಯೆ ನಿಷೇಧದಿಂದ ಭಾರತದ ಸಂವಿಧಾನದ 19 (ಜಿ) ವಿಧಿ ಖಾತರಿಪಡಿಸಿದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಹಾಗೆಯೇ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಜೀವನೋಪಾಯದ ಹಕ್ಕನ್ನು ಉಲ್ಲಂಘಿಸಿವೆ. ಹಾಗೆಯೇ ಈ ಸುಗ್ರೀವಾಜ್ಞೆಯು ವ್ಯಾಪಾರ ಮತ್ತು ವ್ಯವಹಾರದ ಹಕ್ಕನ್ನು ಉಲ್ಲಂಘಿಸಿವೆ ಎಂದು ಅರ್ಜಿದಾರ ಮುಹಮ್ಮದ್ ಆರಿಫ್ ತಮ್ಮ ಹೈಕೋರ್ಟ್ಗೆ ತಿಳಿಸಿದ್ದಾರೆ.
ದೇಶದಲ್ಲಿ ಪ್ರಾಣಿಗಳನ್ನು ವಧಿಸುವುದನ್ನು ನಿಷೇಧಿಸುವುದರಿಂದ ಮಾಂಸ ಮಾರಾಟಗಾರರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಹಾಗೆಯೇ ಈ ಕಾನೂನಿನಿಂದ ಅವರ ವ್ಯಾಪಾರದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಇದರೊಂದಿಗೆ ನಾಗರಿಕರು ತಮ್ಮ ಆಹಾರದ ಆಯ್ಕೆಯನ್ನು ಕಳೆದುಕೊಳ್ಳಲಿದ್ದಾರೆ. ಹೀಗಾಗಿ ಈ ಕಾನೂನನನ್ನು ಪುನರ್ಪರಿಶೀಲಿಸಬೇಕೆಂದು ಅರ್ಜಿದಾರರು ವಾದಿಸಿದರು. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್ ಫೆಬ್ರವರಿ 17 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಈ ಹಿಂದೆ ವಿರೋಧ ಪಕ್ಷದ ವಿರೋಧದ ನಡುವೆಯು ಗೋಹತ್ಯೆ ನಿಷೇಧ ಕಾಯ್ದೆಯು ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು. ಆದರೆ ವಿಧಾನಪರಿಷತ್‌ನಲ್ಲಿ ಮಂಡನೆ ಆಗಿರಲಿಲ್ಲ. ಇದೇ ವೇಳೆ ಸಭಾಪತಿ ಬದಲಾವಣೆ ಗೊಂದಲಗಳು ಉಂಟಾಗಿದ್ದವು. ಇದೇ ಕಾರಣದಿಂದ ಸುಗ್ರೀವಾಜ್ಞೆಯ ಮೂಲಕ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿತು.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ