ರಿಯಾದ್: ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಝಂಝಂ ವಾಟರ್ ಹೆಸರಿನಲ್ಲಿ ಸಾದಾ ನೀರನ್ನು ಮಾರಾಟ ಮಾಡುತ್ತಿದ್ದ ವಿದೇಶಿಯರನ್ನು ಬಂಧಿಸಲಾಗಿದೆ. ವಂಚನೆ ಬಗ್ಗೆ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ರಿಯಾದ್ ಪುರಸಭೆ ತಪಾಸಣೆ ನಡೆಸಿ,ಈ ಘಟಕವನ್ನು ತಂಡವು ಮೊಹರು ಮಾಡಿದೆ.
ಕಳೆದ ದಿನ ರಿಯಾದ್‌ನ ಕಟ್ಟಡದೊಳಗೆ ವಂಚನೆ ಘಟಕ ಪತ್ತೆಯಾಗಿದೆ. ಝಂಝಂ ಲೇಬಲ್ ನೊಂದಿಗೆ ಸಾದಾ ನೀರನ್ನು ಬಾಟಲಿಯಲ್ಲಿ ತುಂಬಿಸಿ, ಅದನ್ನು ರಸ್ತೆಬದಿಗಳಲ್ಲಿ ಮಾರಾಟ ಮಾಡಲಾಗುತ್ತದೆ. ಈ ನಕಲಿ ಘಟಕವನ್ನು ವಿದೇಶಿಯರು ನಡೆಸುತ್ತಿದ್ದು, ಅವರನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ.ಬಾಟಲಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.ಯಾತ್ರಿಕರನ್ನು ಶೋಷಿಸಿದ ವಂಚಕರನ್ನು ಕಾನೂನು ಕ್ರಮಕ್ಕೆ ಒಪ್ಪಿಸಲಾಗಿದೆ.
ಝಂಝಮ್ ಮಕ್ಕಾದ ಪವಿತ್ರ ನೀರಾಗಿದೆ.
ಝಂಝಮ್ ಬಾವಿಯಿಂದ ನೇರವಾಗಿ ಸಂಗ್ರಹಿಸಿದ ನೀರನ್ನು ಮಕ್ಕಾದ ಸ್ಥಾವರ ಮೂಲಕ ಸರಬರಾಜು ಮಾಡಲಾಗುತ್ತದೆ.ಮಕ್ಕಾ ಮತ್ತು ಮದೀನಾದಲ್ಲಿರುವ ಎಲ್ಲರಿಗೂ ಅಗತ್ಯವಿರುವಂತೆ ತೆಗೆದುಕೊಳ್ಳಬಹುದು.
ಮಕ್ಕಾದಿಂದ ದೂರದ ಪ್ರದೇಶಗಳ ಜನರ ಅನುಕೂಲಕ್ಕಾಗಿ 5 ಲೀಟರ್ ಝಂಝಮ್ ನೀರಿಗೆ ಕೇವಲ ಐದು ರಿಯಾಲ್ ಮಾತ್ರ ಖರ್ಚಾಗುತ್ತದೆ. ಇತ್ತೀಚೆಗೆ ಆಯ್ದ ಮಾಲ್‌ಗಳ ಮೂಲಕವೂ ಝಂಝಂ ವಿತರಿಸಲಾಗುತ್ತಿದೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ