ದಾವಣಗೆರೆ: ಸಚಿವ ಸ್ಥಾನ ಸಿಗದವರು ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ, ಇಂತಹವರು ಕೇಂದ್ರದ ನಾಯಕರೊಂದಿಗೆ ದೂರು ನೀಡಬಹುದು. ಅವರನ್ನು ಯಾರು ಕೂಡ ತಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ನಾಯಕರ ಅಪೇಕ್ಷೆಯಂತೆ ಒಂದು ಸ್ಥಾನ ಖಾಲಿ ಇಟ್ಟು ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ. ಸಚಿವ ಸ್ಥಾನ ಸಿಗದ 10-12 ಶಾಸಕರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ತಮ್ಮ ಇತಿ ಮಿತಿಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಿದ್ದೇನೆ. ಆರೋಪ ಮಾಡುವವರು ಕೇಂದ್ರದ ನಾಯಕರೊಂದಿಗೆ ತಿಳಿಸಬಹುದು. ಅವರಿಗೆ ಯಾರು ಕೂಡ ಅಡ್ಡಿ ಮಾಡುವುದಿಲ್ಲ ಎಂದರು.
ಸುಳ್ಳು ಆರೋಪಗಳನ್ನು ಹೇಳಿ ಗೊಂದಲ ಸೃಷ್ಟಿಸಬಾರದು, ಈ ಮೂಲಕ ಪಕ್ಷದ ಶಿಸ್ತಿಗೆ ಧಕ್ಕೆ ತರಬಾರದು. ಕೇಂದ್ರದ ಆಶೀರ್ವಾದ ಇರುವುದರಿಂದ ಮುಂದಿನ ಎರಡೂವರೆ ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಜನವರಿ ತಿಂಗಳಾಂತ್ಯಕ್ಕೆ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಮಾರ್ಚ್ ನಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗತಿಗಳನ್ನು ನೋಡಿಕೊಂಡು ಉತ್ತಮವಾದ, ರೈತ ಪರವಾದ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ