ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಪ್ರಾಯೋಜಕತ್ವದಲ್ಲಿ ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದಲ್ಲಿ ಕಾಮಗಾರಿ ಪೂರ್ಣಗೊಂಡ ಇಹ್ಸಾನ್ ಸೆಂಟರ್ ಜನವರಿ 17 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಸದ್ರಿ ಕಾರ್ಯಕ್ರಮದಲ್ಲಿ ಇಹ್ಸಾನ್ ಸಮಿತಿಯ ದಶ ವಾರ್ಷಿಕ ಘೋಷಣೆಯೂ ನಡೆಯಲಿದೆ.
ಇಹ್ಸಾನ್ ಕರ್ನಾಟಕ ಸಮಿತಿ ಚೇರ್ಮಾನ್ ಮೌಲಾನಾ ಎನ್ ಕೆ ಎಂ ಶಾಫೀ ಸಅದಿ ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಪ್ರಸಾದ್ ಅಬ್ಬಯ್ಯಾ ರವರು ಉದ್ಘಾಟನಾ ಭಾಷಣ ಹಾಗೂ ಇಹ್ಸಾನ್ ಕರ್ನಾಟಕ ಸಮಿತಿ ಉಪಾಧ್ಯಕ್ಷರಾದ ಡಾ| ಎಂ ಎಸ್ ಎಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿಯವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಇಹ್ಸಾನ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಎಸ್ ಪಿ ಹಂಝ ಸಖಾಫಿ ಬಂಟ್ವಾಳ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ್ ಹೊರಟ್ಟಿ, ಹುಬ್ಬಳ್ಳಿ ನಗರ ಶಾಸಕರಾದ ಅರವಿಂದ್ ಬೆಲ್ಲದ್, ಹುಬ್ಬಳ್ಳಿ ಮಾಜಿ ಶಾಸಕರಾದ ಅಬ್ದುಲ್ ಹಕೀಮ್ ಹಿಂಡಿಸಗೇರಿ, ಕರ್ನಾಟಕ ವಕ್ಫ್ ಸದಸ್ಯರಾದ ಅಡ್ವಕೇಟ್ ಆಸಿಫ್ ಅಲಿ ಶೇಖ್, ಜನಾಬ್ ಅನ್ವರ್ ಬಾಷಾ, ಜನಾಬ್ ಯಾಕೂಬ್ ಯೂಸುಫ್, ಕರ್ನಾಟಕ ಮುಸ್ಲಿಮ್ ಜಮಾಅತ್ ಉಪಾಧ್ಯಕ್ಷರಾದ ಜನಾಬ್ ಸೈಫುಲ್ಲಾ ಸಾಬ್, ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ| ಶೇಖ್ ಬಾವ ಮಂಗಳೂರು, ಪ್ರಧಾನ ಕಾರ್ಯದರ್ಶಿ ಜನಾಬ್ ಖಮರುದ್ದೀನ್ ಗೂಡಿನಬಳಿ, ಕೆಸಿಎಫ್ ಸೌದಿ ಅರೇಬಿಯಾ ನೇತಾರರಾದ ಹಂಝ ಮೈಂದಾಳ, ಮುಸ್ತಫಾ ಹಾಸನ್, ಇಸ್ಮಾಯಿಲ್ ಜೋಗಿಬೆಟ್ಟು ಹಾಗೂ ಇನ್ನಿತರ ನೇತಾರರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ