ಬೆಂಗಳೂರು,ಜ.17-ಶಿವಮೊಗ್ಗದ ಭದ್ರಾವತಿಯಲ್ಲಿ ನಿನ್ನೆ ನಡೆದ ಆರ್‌ಎಎಫ್ ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿದ್ದು, ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದಿದ್ದಾರೆ.
ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ.
ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆರ್ ಎಎಫ್ ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ