ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಉಳ್ಳಾಲದ ಅಬ್ಬಕ್ಕ ವೃತ್ತದ ಸಮೀಪವಿರುವ ಖಾಸಗಿ ನರ್ಸಿಂಗ್ ಕಾಲೇಜಿನ ನಲವತ್ತು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಕಾಲೇಜನ್ನು ಫೆಬ್ರವರಿ 19ರವರೆಗೆ ಸೀಲ್ ಡೌನ್ ಮಾಡಲಾಗಿದೆ.
ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುವವರ ಪೈಕಿ ಹೆಚ್ಚಿನ ಸಂಖ್ಯೆಯಲ್ಲಿ ಕೇರಳದ ವಿದ್ಯಾರ್ಥಿಗಳಿದ್ದು ಕಾಲೇಜು ಪ್ರಾರಂಭದ ನಂತರ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿತ್ತು. ಹಾಗೆ ಪರೀಕ್ಷೆ ನಡೆಸಿದ್ದಾಗ ಕಾಲೇಜಿನ ನಲವತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಇದೀಗ ಅವರನ್ನೆಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಉಳ್ಳಾಲ ನಗರಸಭೆಯ ಕಮಿಷನರ್ ಮತ್ತು ಡಿಎಚ್ಒ ಈ ಸಂಬಂಧ ಪರಿಶೀಲನೆ ನಡೆಸಿದ್ದು 19 ದಿನಗಳ ಮಟ್ಟಿಗೆ ಇಡೀ ಕಾಲೇಜನ್ನು ಕಂಟೋನ್ಮೆಂಟ್ ಝೋನ್ ಎಂದು ಗುರುತಿಸಿದ್ದಾರೆ.