ರಿಯಾದ್ : ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಈ ವರ್ಷದ ಹಜ್ ನಿರ್ವಹಿಸಲು ಅವಕಾಶ ನೀಡಲಾಗುವುದು ಎಂದು ಸೌದಿ ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಈ ವರ್ಷ ವಿದೇಶಗಳಿಂದ ಬರುವ ಯಾತ್ರಾರ್ಥಿಗಳಿಗೂ ಹಜ್ ನಿರ್ವಹಿಸಲು ಅವಕಾಶ ನೀಡಲಾಗುವುದು.
ಕೋವಿಡ್ ಪರಿಸ್ಥಿತಿಯಲ್ಲಿ ಹಜ್ ನಿರ್ವಹಣೆಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬಾರಿಯೂ ಕೋವಿಡ್ ಭಯದ ಮಧ್ಯೆ ಹಜ್ ನಡೆಯಲಿದೆ. ಕಳೆದ ವರ್ಷ, ಸೌದಿ ಅರೇಬಿಯಾದೊಳಗೆ ಸುಮಾರು 1,000 ಜನರಿಗೆ ಮಾತ್ರ ಹಜ್ ನಿರ್ವಹಿಸಲು ಅವಕಾಶವಿತ್ತು. ಅದರಲ್ಲಿ ಭಾರತೀಯರು ಸೇರಿದಂತೆ ವಿದೇಶಿಯರು ಒಳಗೊಂಡಿದ್ದರು.
ಆದರೆ ಈ ವರ್ಷ, ಹಜ್ನಲ್ಲಿ ವಿದೇಶಗಳಿಂದ ಯಾತ್ರಿಕರು ಭಾಗವಹಿಸಲು ವ್ಯವಸ್ಥೆ ಮತ್ತು ಚರ್ಚೆಗಳು ನಡೆಯುತ್ತಿವೆ. ಅದೇ ಸಮಯದಲ್ಲಿ, ಕೋವಿಡ್ ವಿರುದ್ಧ ಲಸಿಕೆ ಹಾಕಿದವರಿಗೆ ಮಾತ್ರ ಈ ಹಜ್ ನಿರ್ವಹಿಸಲು ಅವಕಾಶವಿರುತ್ತದೆ ಎಂದು ಸೌದಿ ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ ಸೌದಿ ಮಾಧ್ಯಮ ಹೇಳಿದೆ. ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮಕ್ಕಾ ಮತ್ತು ಮದೀನಾದಲ್ಲಿ ವಿಶೇಷ ವೈದ್ಯಕೀಯ ತಂಡವು ಸಜ್ಜವಾಗಿರಲಿದೆ. ಯಾತ್ರಾರ್ಥಿಗಳು ಆಗಮಿಸಿದ ಸಮಯದಿಂದ ಹಿಂದಿರುಗುವವರೆಗೂ ಸೇವೆ ಅಗತ್ಯವಿರುವುದರಿಂದ ಹಜ್ ಮತ್ತು ಉಮ್ರಾ ಸಚಿವಾಲಯವು ಆರೋಗ್ಯ ಸಚಿವಾಲಯದೊಂದಿಗೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ.
ಅಗತ್ಯ ಸೇವೆ ಸಲ್ಲಿಸಲು ಆಗಮಿಸುವ ಆರೋಗ್ಯ ಕಾರ್ಯಕರ್ತರು ಮತ್ತು ಸಿಬ್ಬಂದಿಗಳ ವೈದ್ಯಕೀಯ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರವೇ ಪವಿತ್ರ ಸ್ಥಳಗಳಿಗೆ ಕರೆದೊಯ್ಯಲಾಗುತ್ತದೆ. ಜುಲೈನಲ್ಲಿ ನಡೆಯುವ ಹಜ್ಗಿಂತ ಮುಂಚಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ವಿತರಣೆಯು ಪೂರ್ಣಗೊಳ್ಳುವ ನಿರೀಕ್ಷೆಯಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ