janadhvani

Kannada Online News Paper

ಸೆಕ್ಸ್ ಪ್ರಕರಣ: ಮಾನಹರಣ ವರದಿ ತಡೆಯುವಂತೆ ಕೋರ್ಟ್ ಮೊರೆ ಹೋದ 6 ಸಚಿವರು

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣ ಬಯಲಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ,
ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಆರು ಸಚಿವರು, ನ್ಯಾಯಾಲಯದ ಮೊರೆ ಹೋಗಿದ್ದಾರೆ.

ತಮ್ಮ ವಿರುದ್ಧ ಮಾನಹಾನಿಕಾರಿ ಸುದ್ದಿಯನ್ನು ನಿರ್ಬಂಧಿಸುವಂತೆ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್, ಕೃಷಿ ಸಚಿವ ಬಿ. ಸಿ. ಪಾಟೀಲ್, ಕ್ರೀಡಾ ಸಚಿವ ನಾರಾಯಣಗೌಡ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಬೆಂಗಳೂರಿನ ಸಿವಿಲ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯ, ನಾಳೆ ಆದೇಶ ನೀಡುವ ಸಾಧ್ಯತೆಯಿದೆ. ಕೋರ್ಟ್ ಮೊರೆ ಹೋಗಿರುವ ಆರು ಸಚಿವರ ನಡೆ ತೀವ್ರ ಕುತೂಹಲ ಕೆರಳಿಸಿದೆ.