ಕೊರೋನ ಲಾಕ್‌ಡೌನ್ ನಂತರ ರಾಜ್ಯದ ಶಿಕ್ಷಣ ಕ್ಷೇತ್ರವನ್ನು ಗಮನಹರಿಸಿದಾಗ ಹಲವಾರು ಸಮಸ್ಯೆಗಳು ಗೋಚರಿಸುತ್ತಿದೆ. ಅದರಲ್ಲಿ ಮುಖ್ಯವಾಗಿ ಲಾಕ್‌ಡೌನ್ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗುವ ಉತ್ಸಾಹ ತೋರುತ್ತಿಲ್ಲ. ರಾಜ್ಯದಲ್ಲಿ ನಡೆದ ಕೆಲವು ಅಧ್ಯಯನಗಳ ಪ್ರಕಾರ ಮನೆಯ ಆರ್ಥಿಕ ಪರಿಸ್ಥಿತಿ , ಬಾಲ ಕಾರ್ಮಿಕತೆ, ಶಿಕ್ಷಣದ ಬಗ್ಗೆ ವಿದ್ಯಾರ್ಥಿ- ಪೊಷಕರಿಗೆ ಕಾಳಜಿಯ ಕೊರತೆ , ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆ,ನಿರಾಸಕ್ತಿ ಮುಂತಾದ ಹಲವಾರು ಕಾರಣಗಳಿಂದ ಕಳೆದ ಕೊರೋನಾ ಲಾಕ್-ಡೌನ್ ನಂತರ ರಾಜ್ಯದಲ್ಲೇ ಸುಮಾರು ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಗೆ ಮರು ದಾಖಲಾತಿಗಳನ್ನು ಪಡೆದಿರುವುದಿಲ್ಲ ಎಂಬ ಆಘಾತಕಾರಿ ವರದಿಯನ್ನು ನಮಗೆ ಕಾಣಲು ಸಾಧ್ಯವಾಗಿದೆ. ವಿದ್ಯಾರ್ಥಿಗಳ ಗೈರು ಹಾಜರಾತಿ ಕೂಡ ಗಣನೀಯ ಪ್ರಮಾಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರದಿಯಾಗುತ್ತಿದೆ.
ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳ ಪೈಕಿ ಸುಮಾರು 25 ಸಾವಿರ ಮಂದಿ ಮುಂದಿನ ವಿದ್ಯಾಭ್ಯಾಸ ನಡೆಸುತ್ತಿಲ್ಲ. ಅದೇ ರೀತಿ ಪ್ರಥಮ ಪಿಯುಸಿ ಯಿಂದ ದ್ವಿತೀಯ ಪಿಯುಸಿಗೆ ತೇರ್ಗಡೆ ಆದವರ ಪೈಕಿ 70 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಗೆ ಇನ್ನೂ ಕೂಡ ದಾಖಲಾಗಿಲ್ಲ. ಅದೇ ರೀತಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಕೂಡ ಗೈರುಹಾಜರಾಗುತ್ತಿರುವ ಸಂಖ್ಯೆ ಬಹಳ ಹೆಚ್ಚಿದೆ.
ಶಾಲಾ ಕಾಲೇಜು ಅರ್ಧದಲ್ಲಿ ಮೊಟಕುಗೊಳಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬದಲಾಗಿ ಕುಟುಂಬ ನಿರ್ವಹಣೆ ಮಾಡಲು ಬೇಸಾಯ ,ಕೂಲಿ, ಕಾರ್ಖಾನೆಗಳಿಗೆ ದುಡಿಮೆಗೆ ಹೋಗುತ್ತಿದ್ದಾರೆ ಎಂಬ ಮಾಹಿತಿಗಳು ಬರುತ್ತಿದೆ.
ಇದರ ಗಂಭೀರತೆಯನ್ನು ಮನಗಂಡು ಸಮಾಜದಲ್ಲಿ ಯಾರು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದೊಂದಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ‘ಉತ್ತಮ ಭವಿಷ್ಯಕ್ಕಾಗಿ ಕಾರ್ಯಪ್ರವೃತ್ತರಾಗೋಣ’ಎಂಬ ಘೋಷಾ ವಾಕ್ಯದೊಂದಿಗೆ “ಝೀರೋ ಡ್ರಾಪ್ ಔಟ್” ಎಂಬ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಈ ಅಭಿಯಾನದಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಸಮಾಲೋಚನೆ, ವಿದ್ಯಾರ್ಥಿಗಳ ಸಮಾಲೋಚನೆ, ಜಾಗೃತಿ ಕಾರ್ಯಕ್ರಮ, ಪೋಷಕರ ಸಭೆ, ಹೆಲ್ಪ್ ಡೆಸ್ಕ್ ಮುಂತಾದ ಕಾರ್ಯಕ್ರಮಗಳು ನಡೆಯಲಿಕ್ಕಿದೆ.
ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳು, ಪೋಷಕರು, ಅಧಿಕಾರಿಗಳು ಅಭಿಯಾನದಲ್ಲಿ ನಮ್ಮೊಂದಿಗೆ ಕೈಜೋಡಿಸಿ ಅಭಿಯಾನವನ್ನು ಯಶಸ್ವಿಗೊಳಿಸುವಲ್ಲಿ ಕಾರಣಕರ್ತರಾಗಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತಿದ್ದೇವೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ