ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸಲಹೆಗಾರ ಪಿ.ಕೆ. ಸಿನ್ಹಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿನ್ಹಾ ಅವರು ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ನಿವೃತ್ತರಾದ ನಂತರ, ಪ್ರಧಾನಿ ಕಚೇರಿಯಲ್ಲಿ ಪ್ರಧಾನ ಸಲಹೆಗಾರ ಎಂಬ ಹೊಸ ಹುದ್ದೆಯನ್ನು ಸೃಷ್ಟಿಸಿ, ಆ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು. ಅವರು ಎಲ್ಲಾ ಸಚಿವಾಲಯಗಳು, ಇಲಾಖೆಗಳಿಗೆ ಸಂಬಂಧಿಸಿದ ನೀತಿಗಳ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದರು. ನೇಮಕಾತಿ ಆದೇಶದ ಪ್ರಕಾರ ಸಿನ್ಹಾ ಅವರ ಅಧಿಕಾರಾವಧಿ ಮುಂದಿನ ಆದೇಶದವರೆಗೆ ಅಥವಾ ಪ್ರಧಾನಿ ಮೋದಿ ಅವರ ಅಧಿಕಾರಾವಧಿ ಅಂತ್ಯದವರೆಗೆ ಇತ್ತು.
ಆದರೆ ಇದೀಗ ಸಿನ್ಹಾ ಅವರು ದಿಢೀರ್ ರಾಜೀನಾಮೆ ಸಲ್ಲಿಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ರಾಜಕೀಯ ಪಡಸಾಲೆಯಲ್ಲಿ ಹೊಸ ಚರ್ಚೆಯನ್ನೇ ಹುಟ್ಟು ಹಾಕಿದೆ. ವೈಯಕ್ತಿಕ ಕಾರಣಗಳನ್ನು ನೀಡಿ ಸಿನ್ಹಾ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಆದರೆ ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯ ಯಾವುದೇ ಹೇಳಿಕೆಯನ್ನು ನೀಡಿಲ್ಲ.
1977ರ ಬ್ಯಾಚ್‌ನ ಉತ್ತರ ಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದ ಸಿನ್ಹಾರನ್ನು ನಿವೃತ್ತಿ ನಂತರ 2019 ಆಗಸ್ಟ್ 30ರಂದು ಪ್ರಧಾನ ಮಂತ್ರಿ ಕಚೇರಿಯಲ್ಲಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ (ಒಎಸ್‌ಡಿ) ನೇಮಕ ಮಾಡಲಾಗಿತ್ತು. ಬಳಿಕ 2019ರ ಸೆ.11ರಂದು ಅವರು ಪ್ರಧಾನಿ ನರೇಂದ್ರ ಮೋದಿಯವರ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಲಾಯಿತು. ಸಿನ್ಹಾ ಅವರು ನಾಲ್ಕು ವರ್ಷಗಳ ಕಾಲ ಸಂಪುಟ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇದಕ್ಕೂ ಮೊದಲು ಸಿನ್ಹಾ ಅವರು ವಿದ್ಯುತ್ ಸಚಿವಾಲಯದ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)