ಬೆಂಗಳೂರು,ಮಾ. 29; ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ. ಕಳೆದ ನಾಲ್ಕೈದು ತಿಂಗಳಿನಿಂದ ನಿಯಂತ್ರಣದಲ್ಲಿದ್ದ ಕೊರೋನಾ ಸೋಂಕು ಇದೀಗ ದಿಢೀರನೆ ಅಧಿಕವಾಗಿದೆ.
ಮಹಾರಾಷ್ಟ್ರ, ಗುಜರಾತ್, ಕೇರಳ ಸೇರಿದಂತೆ ಅಧಿಕ ರಾಜ್ಯಗಳಲ್ಲಿ ಪರಿಸ್ಥಿತಿ ಕೈಮೀರಿದ್ದು, ಈಗಾಗಲೇ ಹಲವಾರು ಪ್ರದೇಶಗಳಲ್ಲಿ ಸೀಲ್ಡೌ ನ್ ಮತ್ತು ರಾತ್ರಿ ಕರ್ಫ್ಯೂ ಘೋಷಿಸಲಾಗಿದೆ. ಅಲ್ಲದೆ, ಮಹಾರಾಷ್ಟ್ರ ಸರ್ಕಾರ ಏಪ್ರಿಲ್.1 ರಿಂದ ರಾಜ್ಯಾದ್ಯಂತ 15 ದಿನಗಳ ಲಾಕ್ಡೌನ್ ಜಾರಿ ಮಾಡಲು ಆಲೋಚಿಸಿದೆ.
ರಾಜ್ಯದಲ್ಲೂ ಸೋಂಕಿತರ ಪ್ರಮಾಣ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಮುಂದಿನ ದಿಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಎಂತಹ ಕ್ರಮಗಳನ್ನು ಜರುಗಿಸಬೇಕು ಎಂದು ಆಲೋಚಿಸುವ ಸಲುವಾಗು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಸಂಜೆ 5 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಕಂದಾಯ ಸಚಿವ ಆರ ಅಶೋಕ್, ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿದಂತೆ ಮತ್ತು ವಲಯವಾರು ಉಸ್ತುವಾರಿಗಳು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಪ್ರ ಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಸೋಂ ಕಿನ ಪ್ರಮಾಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಏನೆಲ್ಲ ಕ್ರಮ ಕೈಗೊಳ್ಳಬೇಕು? ಎಂಬುರದ ಕುರಿತು ಸಭೆಯಲ್ಲಿ ಚರ್ಚೆಯಾಗಲಿದೆ. ಅಲ್ಲದೆ, ಬೆಂಗಳೂರಿಗೆ ಪ್ರತ್ಯೇಕವಾಗಿ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಲಿದ್ಯಾ ಸರ್ಕಾರ? ಎಂಬ ಬಗ್ಗೆಯೂ ಚಿಂತನೆಗಳು ನಡೆಯುತ್ತಿದೆ. ಆದರೆ, ಸಿಎಂ ಸಭೆಯ ಬಳಿಕವೇ ಸ್ಪಷ್ಟ ಚಿತ್ರಣ ಹೊರಬಿಳಲಿದೆ.
ನಗರದಲ್ಲಿ ಇದೀಗ ಪ್ರತಿದಿನ ಕೊರೋನಾ ಸೋಂಕಿತರ ಸಂಖ್ಯೆ 2 ಸಾವಿರದ ಗಡಿ ದಾಟುತ್ತಿದೆ. ಹೀಗಾಗಿ ಈ ಸಂಖ್ಯೆ ಅಧಿಕವಾದರೆ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಎಚ್ಚೆತ್ತುಕೊಂಡ ಸರ್ಕಾರದಿಂದ ಇಂದು ಮಹತ್ವದ ‘ಕೊರೋನಾ ಸಭೆ’ ನಡೆಸುತ್ತಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಲಾಕ್ಡೌನ್ ಭವಿಷ್ಯ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.
ಇಂದಿನ ಸಭೆಯಲ್ಲಿ ನಿರ್ಧಾರ ಆಗಲಿದೆ ಕೆಲವೊಂದು ಮಹತ್ವದ ವಿಚಾರ.!!
- ಮತ್ತೆ ಬೆಂಗಳೂರಿಗರಿಗೆ ಲಾಕ್ ಡೌನ್.. ಸೆಮಿ ಲಾಕ್ ಡೌನ್ ಅಥವಾ ನೈಟ್ ಕರ್ಫ್ಯೂ ಬಿಸಿ.!?
- ಸರ್ಕಾರಕ್ಕೆ ಈಗಾಗಲೇ ಚಿತ್ರ ಮಂದಿರಕ್ಕೆ ಶೇ.50 ರಷ್ಟು ಫಿಲ್ಲಿಂಗ್ ಆದೇಶ ಮಾಡಿ ಎಂದು ಕೋರಿಕೊಂಡಿದ್ದ ಬಿಬಿಎಂಪಿ.
- ಆದರೆ ಬಿಬಿಎಂಪಿ ಪ್ರಸ್ತಾವನೆ ತಿರಸ್ಕಿರಿಸಿರುವ ಸಿಎಂ ಯಡಿಯೂರಪ್ಪ.
ಇಂದಿನ ಸಭೆಯಲ್ಲಿ ಪ್ರಸ್ತಾಪವಾಗಲಿರುವ ಪ್ರಮುಖ ಅಂಶಗಳು.!!
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ