ಬೆಂಗಳೂರು, ಏ 1 : ಮುಖ್ಯಮಂತ್ರಿಗಳ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿದೆ ಎಂದು ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯ ಗಂಬೀರ ಆರೋಪ ಮಾಡಿದ್ದಾರೆ.
ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಸರ್ಕಾರ ವಜಾಗೊಳಿಸಿ, ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದುಸರಣಿ ಟ್ವೀಟ್ ಮೂಲಕ ಆಗ್ರಹಪಡಿಸಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡಿದ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ದರಾಗಿ ಉಳಿಯಬೇಕು ಎಂದರು.
ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. -ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು
ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ಮೋದಿ ಮತ್ತು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು.
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದಸೋಂಕು ಕಾರಣ ಎನ್ನುವುದನ್ನು ಈಶ್ವರಪ್ಪನವರ ತನ್ನ ಸಂಶೋಧನೆ ಮೂಲಕ ಬಹಿರಂಗ ಗೊಳಿಸಿದ್ದಾರೆ. ನನ್ನ ಸರ್ಕಾರವನ್ನು ಶೇಕಡ 10 ರಕಮೀಷನ್ ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ ನೀವೇ ರಾಜ್ಯಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ-ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, “ನಾ ಖಾವುಂಗಾ, ನಾ ಖಾನೆ ದೂಂಗಾ” ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು “ಮೈ ಬಿ ಖಾವೂಂಗಾ, ತುಮ್ ಬಿ ಖಾವೋ” ಎಂದು ಬದಲಿಸಿ ಬಿಡಿ-ಎಂದು ಲೇವಡಿ ಮಾಡಿದರು.
ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ.-ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರಸ್ವರೂಪದ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ಆಹ್ರಹಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್