ವಿಟ್ಲ : ಡಿ’ ಗ್ರೂಪ್ ವಿಟ್ಲ (ಡಿ ಫೋರ್ ಡೂ)(R) ಇದರ 12 ನೇ ವಾರ್ಷಿಕೋತ್ಸವದ ಅಂಗವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ, ಮಂಗಳೂರು ಸಹಭಾಗಿತ್ವದಲ್ಲಿ ಬ್ರಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ದಿನಾಂಕ 04 ಎಪ್ರಿಲ್ 2021 ರ ಆದಿತ್ಯವಾರ ರಿಹಾ ಪ್ಲಾನೆಟ್ ಸಭಾಂಗಣ ವಿಟ್ಲದಲ್ಲಿ ಯಶಸ್ವಿಯಾಗಿ ನಡೆಯಿತು.
ಜನಾಬ್: ಖಲಂದರ್ ಪರ್ತಿಪ್ಪಾಡಿ(ಅಧ್ಯಕ್ಷರು ಡಿ’ಗ್ರೂಪ್ ವಿಟ್ಲ) ಸಭಾದ್ಯಕ್ಷತೆ ವಹಿಸಿದ್ದ ರಕ್ತದಾನ ಶಿಬಿರವನ್ನು ಜನಾಬ್: ಆರ್.ಕೆ ಅಬ್ದುಲ್ಲಾ ಹಾಜಿ ಸ್ಮೈಲ್ ಪಾರ್ಕ್(ಮಾಲೀಕರು ರಿಹಾ ಪ್ಲಾನೆಟ್ ವಿಟ್ಲ) ದುವಾಶೀರ್ವಚನ ನೀಡಿದರು.
ಯಶಸ್ವಿಯಾಗಿ ನಡೆದ ಶಿಬಿರದಲ್ಲಿ 70 ಮಂದಿ ರಕ್ತದಾನ ಮಾಡುವ ಮೂಲಕ ಜೀವದಾನಿಗಳಾದರು.ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಯೇನೆಪೋಯ ಆಸ್ಪತ್ರೆಯ ರಕ್ತನಿಧಿಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಜನಾಬ್: ಅಬೂಬಕರ್ ಅನಿಲಕಟ್ಟೆ ಯವರು ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ರಶೀದ್ ವಿಟ್ಲ,ಶಾಕಿರ್ ಅಳಕೆಮಜಲು,ರಾಮದಾಸ್ ಶೆಣೈ,ಹಸೈನಾರ್, ಆಶಿಕ್ ಫೋಕಸ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಪದಾಧಿಕಾರಿಗಳು ಹಾಗೂ ಡಿ’ಗ್ರೂಪ್ ವಿಟ್ಲ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಕ್ತ ದಾನ ಮಾಡಿದ ಸರ್ವ ಸಹೃದಯಿ ದಾನಿಗಳಿಗೂ ಯೇನೆಪೋಯ ಆಸ್ಪತ್ರೆ ರಕ್ತನಿಧಿಯ ಸಿಬ್ಬಂದಿ ವರ್ಗಕ್ಕೂ,ಕಾರ್ಯಕ್ರಮದ ಯಶಸ್ವಿಗಾಗಿ ಹಗಲಿರುಳು ಶ್ರಮಿಸಿದ ಡಿ’ಗ್ರೂಪ್ ವಿಟ್ಲ ಪದಾಧಿಕಾರಿಗಳಿಗೂ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೂ ಸಂಘಟಕರು ಕೃತಜ್ಞತೆಯನ್ನು ತಿಳಿಸಿದ್ದಾರೆ.
ವರದಿ
ಮಾಧ್ಯಮ ವಿಭಾಗ
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ)
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್