janadhvani

Kannada Online News Paper

ಆನ್‌ಲೈನ್‌ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ

ಬೆಂಗಳೂರು: ‘ಆನ್‌ಲೈನ್‌ನಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ವಿದ್ಯಾರ್ಥಿಗಳು, ಪೋಷಕರು ಬೇಡಿಕೆ ಇಡುತ್ತಿದ್ದಾರೆ. ನಮ್ಮ ವ್ಯವಸ್ಥೆಯಲ್ಲಿ ಅದು ಸಾಧ್ಯವಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳಲ್ಲಿ ಎಲ್ಲ ಪರೀಕ್ಷೆಗಳು ಆಫ್‌ಲೈನ್‌ನಲ್ಲಿ (ಕಾಲೇಜುಗಳಲ್ಲಿ) ನಡೆಯುತ್ತದೆ. ಕೆಲವು ಡೀಮ್ಡ್ ವಿಶ್ವವಿದ್ಯಾಲಯಗಳು ಆನ್‌ಲೈನ್‌ನಲ್ಲಿ ಪರೀಕ್ಷೆ ಮಾಡಿಕೊಳ್ಳುತ್ತಿವೆ. ನಮ್ಮಲ್ಲಿ ಇದಕ್ಕೆ ಅವಕಾಶವಿಲ್ಲ’ ಎಂದರು.

ಸದ್ಯಕ್ಕೆ ಬಸ್ ಮುಷ್ಕರದಿಂದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಎಂಜಿನಿಯರಿಂಗ್ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಕೊಂಚ ವ್ಯತ್ಯಯವಾಗಿದೆ. ಮುಷ್ಕರ ನಿಂತ ಕೂಡಲೇ ಪರೀಕ್ಷೆಗಳು ಆರಂಭವಾವಾಗುತ್ತವೆ’ ಎಂದರು.

‘ಮುಂದಿನ ಶೈಕ್ಷಣಿಕ ವರ್ಷದಲ್ಲಿ (2021-22) ಮೊದಲು ಆನ್ ಲೈನ್ ತರಗತಿಗಳನ್ನು ಆರಂಭ ಮಾಡಲಾಗುವುದು. ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಆಫ್‌ಲೈನ್ ಅಥವಾ ಆಣ್‌ಲೈನ್ ತರಗತಿ ಆಯ್ಕೆ ಮಾಡಿಕೊಳ್ಳಬಹದು. ಆದರೆ, ಎರಡರಲ್ಲಿ ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ’ ಎಂದು ಅವರು ಪುನರುಚ್ಚರಿಸಿದರು.

error: Content is protected !! Not allowed copy content from janadhvani.com