ಮಂಗಳೂರು: ಕರ್ನಾಟಕದಲ್ಲಿ ಕೊರೋನಾ ಎರಡನೇ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ವಾರಾಂತ್ಯ ಕರ್ಫ್ಯೂ, ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಸುರಕ್ಷತೆಗಾಗಿ ವಿಧಿಸಲಾಗಿರುವ
ನಿರ್ಬಂಧನೆಗಳಲ್ಲಿ ಬದಲಾವಣೆ ಅನಿವಾರ್ಯವಿದೆ ಎಂದು ಯುವ ಚಿಂತಕ ಇಕ್ಬಾಲ್ ಬಾಳಿಲ ತಿಳಿಸಿದ್ದಾರೆ.
ಪ್ರತೇಕವಾಗಿ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ ಹೇರಿರುವುದನ್ನು ಹಿಂಪಡೆಯಬೇಕು.
ಎಲ್ಲಾ ಧರ್ಮದವರಿಗೂ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಕಟ್ಟು ನಿಟ್ಟಿನ ನಿಯಮಗಳೊಂದಿಗೆ ಅವಕಾಶ ಮಾಡಿಕೊಡಬೇಕು, ನಿಯಮ ಉಲ್ಲಂಘಿಸಿದವರ ಮೇಲೆ ಕ್ರಮ ಕೈಗೊಳ್ಳಿ. ಆದರೆ ಬಂದ್ ಮಾಡುವುದು ಪರಿಹಾರ ಮಾರ್ಗವಲ್ಲ ಎಂದು ಟ್ರೆಂಡ್ ನಾಯಕ ರಾಜ್ಯ ತರಬೇತುದಾರ ಇಕ್ಬಾಲ್ ಬಾಳಿಲ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಗುಡ್ಡೆಗೆ ಬೆಂಕಿ ಬಿದ್ದಮೇಲೆ ಬಾವಿ ತೋಡಲು ಮುಂದಾದ ರೀತಿಯಾಗಿವೆ ಸರ್ಕಾರದ ನಿಲುವುಗಳು. ಮುಸ್ಲಿಮರು ಪವಿತ್ರ ರಮಲಾನಿನಲ್ಲಿ ಪ್ರತೇಕ ಪ್ರಾರ್ಥನೆ ಮಾಡುವುದರಿಂದ ಮಸೀದಿಯ ಪ್ರವೇಶ ಅಷ್ಟೇ ಅನಿವಾರ್ಯವಾಗಿರುತ್ತದೆ.
ಈಗಾಗಲೇ ಸರಕಾರ ಹೇಳಿದ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿಯೇ ಪ್ರಾರ್ಥನೆ ಸಲ್ಲಿಸಿರುತ್ತಿದ್ದಾರೆ.
ಹೀಗಾಗಿಯೂ ದಾರ್ಮಿಕ ಕೇಂದ್ರಕ್ಕೆ ನಿರ್ಬಂಧ ಹೇರಿರುವುದು ವಿಷಾದನೀಯ.
ಸರಕಾರವು ಈ ಕೂಡಲೇ ಹಿಂಪಡೆದು ಧಾರ್ಮಿಕ ಕೇಂದ್ರಗಳಿಗೆ ಅನುಮತಿ ಒದಗಿಸುವಂತೆ ಒತ್ತಾಯಿಸಿದ್ದಾರೆ. ದಾರ್ಮಿಕ ಕೇಂದ್ರಗಳಿಗೆ ಅನುಮತಿ ನೀಡುವುದಾದರೆ ನಿಯಮಗಳನ್ನು ಸಿದ್ದಪಡಿಸಿಯೇ ಅನುಮತಿ ಕೊಡಿ ಅದನ್ನು ಸ್ವೀಕರಿಸಲು ಕರ್ನಾಟಕದ ಜನತೆ ತಯ್ಯಾರಾಗಿದ್ದಾರೆ ಎಂದು ತಿಳಿಸಿರುತ್ತಾರೆ.
ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಗಳು ತೆರೆದುಕೊಳ್ಳಲಿ.ಅಲ್ಲಿ ಪ್ರಾರ್ಥನೆಗಳು ನಡೆಯಲಿ.
ಪ್ರಾರ್ಥನೆಗೆ ಹೋಗುವುದನ್ನು ತಡೆಯದಿರಿ.
ಮುಸ್ಲಿಮರು ಐದು ಸಮಯ ನಮಾಝ್ ನಿರ್ವಹಿಸಲು ಮಸೀದಿಯಲ್ಲಿ ನಿಯಮ ಅಳವಡಿಸಿ ಅನುಮತಿ ನೀಡುವಂತೆ ಒತ್ತಾಯಿಸಿದ್ದಾರೆ.
ಹಾಗೂ ರಾತ್ರಿಯ ಕರ್ಫ್ಯೂ ಈ ಹಿಂದಿನಂತೆ ರಾತ್ರಿ 10ರಿಂದ 5ರ ತನಕವೇ ಮುಂದುವರಿಯಲಿ ಎಂದು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಈ ಕುರಿತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸಚಿವರುಗಳಿಗೆ ಮುಖ್ಯಮಂತ್ರಿ ಕಾರ್ಯದರ್ಶಿಗಳಿಗೆ ಈಮೇಲ್ ಮೂಲಕ ಮನವಿಯನ್ನು ನೀಡಿರುವುದಾಗಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ