ಚೆನ್ನೈ: ದೇಶದಲ್ಲಿ ಕೋವಿಡ್ –19 ಎರಡನೇ ಅಲೆಯು ಇಷ್ಟೊಂದು ವೇಗವಾಗಿ ಹಬ್ಬಲು ಚುನಾವಣಾ ಆಯೋಗವೇ ಏಕೈಕ ಕಾರಣ ಎಂದು ಮದ್ರಾಸ್ ಹೈಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ಚುನಾವಣಾ ಆಯೋಗವು ಇತ್ತೀಚೆಗೆ ‘ಅತ್ಯಂತ ಬೇಜವಾಬ್ದಾರಿ ಸಂಸ್ಥೆ’ಯಾಗಿದೆ. ಅದರ ಅಧಿಕಾರಿಗಳ ವಿರುದ್ಧ ಕೊಲೆ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದೂ ಹೇಳಿದೆ.
ರ್‍ಯಾಲಿ ಮತ್ತು ಸಭೆಗಳನ್ನು ನಡೆಸಲು ರಾಜಕೀಯ ಪಕ್ಷಗಳಿಗೆ ಅನುಮತಿ ನೀಡುವ ಮೂಲಕ ಸೋಂಕು ಹರಡಲು ಆಯೋಗವು ಕಾರಣವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಅವರ ಪೀಠವು ಹೇಳಿದೆ. ಮೇ 2ರಂದು ಮತ ಎಣಿಕೆ ನಡೆಸುವಾಗ ಕೋವಿಡ್ ತಡೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡಿನ ಸಾರಿಗೆ ಸಚಿವ ಮತ್ತು ಕರೂರ್ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಎಂ.ಆರ್. ವಿಜಯಭಾಸ್ಕರ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಪೀಠವು ನಡೆಸಿತು.
ಎಣಿಕೆ ಕೇಂದ್ರದಲ್ಲಿ ಎಲ್ಲ ಮುನ್ನೆಚ್ಚರಿಕೆಯನ್ನೂ ವಹಿಸಲಾಗುವುದು ಎಂದು ಆಯೋಗದ ವಕೀಲರು ಹೇಳಿದ್ದು ಮುಖ್ಯ ನ್ಯಾಯಮೂರ್ತಿಯವರ ಆಕ್ರೋಶಕ್ಕೆ ಕಾರಣವಾಯಿತು. ‘ರ್‍ಯಾಲಿ ಮತ್ತು ಸಭೆಗಳು ನಡೆಯುವಾಗ ನೀವು ಈ ಲೋಕದಲ್ಲಿ ಇರಲಿಲ್ಲವೇ? ಸಾರ್ವಜನಿಕ ಆರೋಗ್ಯವೇ ಅತ್ಯಂತ ಮುಖ್ಯ. ಪ್ರಜಾಪ್ರಭುತ್ವವು ಖಾತರಿಪಡಿಸುವ ಹಕ್ಕುಗಳನ್ನು ಚಲಾಯಿಸಲು ವ್ಯಕ್ತಿಯು ಬದುಕಿದ್ದರೆ ಮಾತ್ರ ಸಾಧ್ಯ’ ಎಂದು ಪೀಠ ಹೇಳಿದೆ.
ಕೋವಿಡ್ ತಡೆ ಮಾರ್ಗಸೂಚಿ ಪಾಲನೆಗೆ ಸಂಬಂಧಿಸಿ ಕಲ್ಕತ್ತಾ ಹೈಕೋರ್ಟ್ ಕೂಡ ಆಯೋಗದ ನಡೆಯ ಬಗ್ಗೆ ಈ ಹಿಂದೆ ಅಸಮಾಧಾನ ವ್ಯಕ್ತಪಡಿಸಿತ್ತು. ಕೋವಿಡ್ ತಡೆಗೆ ಸುತ್ತೋಲೆ ಹೊರಡಿಸಿ, ಸಭೆಗಳನ್ನು ನಡೆಸಿದರೆ ಸಾಲದು ಎಂದು ಮುಖ್ಯನ್ಯಾಯಮೂರ್ತಿ ಟಿ.ಬಿ.ಎನ್. ರಾಧಾಕೃಷ್ಣನ್ ಹೇಳಿದ್ದರು.
‘ಎಣಿಕೆ ತಡೆಗೆ ಹಿಂಜರಿಯುವುದಿಲ್ಲ’
ಮತ ಎಣಿಕೆ ಕೇಂದ್ರಗಳಲ್ಲಿ ಕೋವಿಡ್ ತಡೆ ಮಾರ್ಗಸೂಚಿ ಪಾಲನೆಗೆ ಯಾವ ಯೋಜನೆ ರೂಪಿಸಲಾಗಿದೆ ಎಂಬುದನ್ನು ಶುಕ್ರವಾರದ ಒಳಗೆ ಕೋರ್ಟ್‌ಗೆ ತಿಳಿಸಬೇಕು. ಇಂತಹ ಯೋಜನೆ ಸಿದ್ಧವಾಗದೇ ಇದ್ದರೆ, ಮೇ 2ರಂದು ನಡೆಯಲಿರುವ ಮತ ಎಣಿಕೆಗೆ ತಡೆ ನೀಡಲು ಹಿಂಜರಿಯವುದಿಲ್ಲ ಎಂದೂ ಕೋರ್ಟ್ ಮೌಖಿಕ ಎಚ್ಚರಿಕೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ