ಮಂಗಳೂರು ನಗರದ ಬಂದರ್ ವಾರ್ಡ್ ವ್ಯಾಪ್ತಿಯಲ್ಲಿ ಅಗತ್ಯತೆ ಆಧಾರದಲ್ಲಿ ಧಾರ್ಮಿಕ ಸಂಸ್ಥೆಗಳನ್ನು ಕೋವಿಡ್ ರೋಗಿಗಳಿಗೆ ಪ್ರಾಥಮಿಕ ಐಸೋಲೇಶನ್ ಘಟಕಗಳಾಗಿ ಬಳಕೆ ಮಾಡಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಮನಾಪ ಸಹಕಾರ,ಅನುಮತಿ ಯೊಂದಿಗೆ ನಡೆಸಲು ಚಿಂತನೆ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಕೋವಿಡ್ ಪ್ರಕರಣಗಳು ಅಧಿಕವಾಗುತ್ತಿದ್ದು,ನಗರದ ಆಸ್ಪತ್ರೆಗಳಲ್ಲಿ ಪ್ರಾಥಮಿಕ ವೈದ್ಯಕೀಯ ಸೌಕರ್ಯಗಳ ಕೊರತೆ ಸಂಭವಿಸಿದರೆ ಪರ್ಯಾಯ ವ್ಯವಸ್ಥೆಗಾಗಿ ಬಂದರ್ ಮತ್ತು ಕುದ್ರೋಳಿ ವಾರ್ಡ್ ನಲ್ಲಿನ ಧಾರ್ಮಿಕ ಸಂಸ್ಥೆಗಳ ಆಡಳಿತ ಮಂಡಳಿಯ ಸಹಕಾರದೊಂದಿಗೆ,ಧಾರ್ಮಿಕ ಸಂಸ್ಥೆಗಳ ಕಟ್ಟಡಗಳನ್ನು ಸ್ಥಳೀಯ ಇಲಾಖೆಗಳ ಸಹಕಾರದೊಂದಿಗೆ ಕೋವಿಡ್ ಪ್ರಾಥಮಿಕ ಶುಶ್ರೂಷಾ ಕೇಂದ್ರವಾಗಿ ಮಾರ್ಪಡಿಸಲು ಚಿಂತನೆ ನಡೆಸಲಾಗಿದೆ.
ಇದರೊಂದಿಗೆ ಸ್ಥಳೀಯ ಸಂಘಟನೆಗಳ ಸಹಕಾರದೊಂದಿಗೆ ಆಂಬುಲೆನ್ಸ್ ವಾಹನ ಸೇವೆ, ಸ್ಥಳೀಯ ವೈದ್ಯರು ಮತ್ತು ಲಭ್ಯ ಪ್ಯಾರಾ ಮೆಡಿಕ್ ವ್ಯಕ್ತಿಗಳ ಸೇವೆಯನ್ನು ಪಡೆದು ಕೋವಿಡ್ ನಿಯಂತ್ರಣ ಹೊಂದಲು ಜಿಲ್ಲಾಡಳಿತಕ್ಕೆ ಸಹಕಾರ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಬಳಕೆ ಮಾಡುವುದಾಗಿ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರಲ್ಲಿ ಸಮಾಲೋಚನೆ ನಡೆಸಲಾಗುವುದು.
ಕೆ.ಅಶ್ರಫ್ (ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?