ಮಂಗಳೂರು: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ದೈನಂದಿನ ಪ್ರಕರಣಗಳು 4 ಲಕ್ಷ ದಾಟಿ, ವಿಶ್ವದಲ್ಲೇ ಹೆಚ್ಚು ಪ್ರಕರಣವು ಭಾರತದಲ್ಲಿ ದಾಖಲಾಗಿದೆ.
ಅದೇ ರೀತಿ, ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಸೂಕ್ತ ಮುಂಜಾಗ್ರತೆ ಕ್ರಮಕ್ಕೆ ವಿಫಲ, ಬೆಂಗಳೂರು ಮಹಾನಗರದಲ್ಲಿ ಆರೋಗ್ಯ ಸ್ಥಿತಿ ಪಾಲನೆ ವಿಫಲ, ವೈದ್ಯಕೀಯ ಸಂಸ್ಥೆಗಳ ಅವ್ಯವಸ್ಥೆ, ದುರಾಡಳಿತ, ಚಾಮರಾಜ ನಗರದ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಕೊರತೆಯಿಂದಾಗಿ ಇಂದು ಸುಮಾರು 20 ಕ್ಕು ಅಧಿಕ ರೋಗಿಗಳ ಮೃತ್ಯು ಹೊಣೆ ಹೊತ್ತು ಮುಖ್ಯ ಮಂತ್ರಿ ಯಡಿಯೂರಪ್ಪ ರವರು ತಕ್ಷಣ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡ ಬೇಕು ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ.ಅಶ್ರಫ್(ಮಾಜಿ ಮೇಯರ್) ಆಗ್ರಹಿಸಿದ್ದಾರೆ.
ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು ದೇಶದಲ್ಲಿ ಇದೀಗ ದಿನ ಒಂದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪುತ್ತಿದ್ದಾರೆ. ಭಾನುವಾರ 3,417 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,18,959ಕ್ಕೆ ಏರಿಕೆ ಆಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ