ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತ ಪಡೆದ ವಿದೇಶಿ ನೆರವಿನಲ್ಲಿ ಪಾರದರ್ಶಕತೆ ಏಕಿಲ್ಲ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದಿಂದ ಉತ್ತರವನ್ನು ಬಯಸಿದ್ದಾರೆ.
ಕೋವಿಡ್ ವಿದೇಶಿ ನೆರವಿಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ‘ಭಾರತ ಯಾವೆಲ್ಲ ಸರಬರಾಜುಗಳನ್ನು ಗಿಟ್ಟಿಸಿಕೊಂಡಿದೆ? ಅದು ಎಲ್ಲಿದೆ? ಅದರಿಂದ ಯಾರು ಪ್ರಯೋಜನ ಪಡೆಯುತ್ತಿದ್ದಾರೆ? ಅವುಗಳನ್ನು ರಾಜ್ಯಗಳಿಗೆ ಹೇಗೆ ಹಂಚಲಾಗುತ್ತಿದೆ? ಪಾರದರ್ಶಕತೆ ಏಕಿಲ್ಲ? ಭಾರತ ಸರ್ಕಾರವೇ, ನಿಮ್ಮ ಬಳಿ ಉತ್ತರವಿದೆಯೇ’ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ವಿದೇಶದಿಂದ ಗಿಟ್ಟಿಸಿದ ಕೋವಿಡ್ ನೆರವಿನ ಬಗ್ಗೆ ಕಾಂಗ್ರೆಸ್ ಪಾರದರ್ಶಕತೆಯನ್ನು ಬಯಸುತ್ತಿದೆ. ಅದನ್ನು ಎಲ್ಲಿಂದ ಮತ್ತು ಹೇಗೆ ಬಳಸಲಾಗಿದೆ ಎಂಬುದರ ಕುರಿತು ದೇಶದ ಜನತೆಗೆ ವಿವರವನ್ನು ನೀಡುವಂತೆ ಸರ್ಕಾರವನ್ನು ಬಯಸಿದೆ.
ಮಗದೊಂದು ಟ್ವೀಟ್ನಲ್ಲಿ ಕೋವಿಡ್ ಬಿಕ್ಕಟ್ಟನ್ನು ನಿಯಂತ್ರಿಸುವಲ್ಲಿ ಮತ್ತು ಜನರಿಗೆ ಉದ್ಯೋಗ ನೀಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವೈಫಲ್ಯವನ್ನು ಕಂಡಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
‘ಲಸಿಕೆ ಇಲ್ಲ, ಉದ್ಯೋಗವೂ ಇಲ್ಲ. ಜನರು ಕೊರೊನಾ ವೈರಸ್ ತೀವ್ರತೆಯನ್ನು ಎದುರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಸಂಪೂರ್ಣ ವೈಫಲ್ಯವನ್ನು ಅನುಭವಿಸಿದೆ’ ಎಂದು ಆರೋಪಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ