ಮಂಗಳೂರು:ಸುಳ್ಯ ತಾಲೂಕಿನಲ್ಲಿ ನಡೆಯುತ್ತಿದ್ದ ಅಕ್ರಮ ಬಂದೂಕು ತಯಾರಿಕಾ ಘಟಕದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಎಸ್‌ಡಿಪಿಐ ಜಿಲ್ಲಾ ನಿಯೋಗ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಜಿಲ್ಲಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಎಸ್ ಡಿಪಿಐ ಮಂ.ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಸುಹೈಲ್ ಖಾನ್ ಉಪಸ್ಥಿತರಿದ್ದರು.
ನಿನ್ನೆ ಪುತ್ತೂರು ಸಹಾಯಕ ಪೋಲಿಸ್ ಅಧೀಕ್ಷಕರಿಗೆ, ಸುಳ್ಯ ವೃತ್ತ ನಿರೀಕ್ಷಕರಿಗೆ ಮತ್ತು ಸುಬ್ರಹ್ಮಣ್ಯ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ಕಲಾಂ ಸುಳ್ಯ,ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಸಿದ್ದೀಕ್ ಕೆ.ಎ ,ಜಿಲ್ಲಾ ಸಮಿತಿ ಸದಸ್ಯ ಜಾಬಿರ್ ಅರಿಯಡ್ಕ , ಸುಳ್ಯ ಎಸ್ ಡಿಪಿಐ ಕಾರ್ಯದರ್ಶಿ ಮುಸ್ತಫಾ ಎಂ.ಕೆ, ಎಸ್ ಡಿಪಿಐ ಕಡಬ ತಾಲೂಕು ಕಾರ್ಯದರ್ಶಿ ರಫೀಕ್ ನೆಲ್ಯಾಡಿ,ತಾಲೂಕು ಸಮಿತಿ ಉಪಾಧ್ಯಕ್ಷ ನೌಶಾದ್ ಕಡಬ, ಶಾಕಿರ್ ಅಳಕೆಮಜಲು, ಅಥಾವುಲ್ಲಾ ಸುಳ್ಯ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.