ನವದೆಹಲಿ: ಈ ವರ್ಷದ ಹಜ್ ತೀರ್ಥಯಾತ್ರೆ ಕುರಿತು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.ಸೌದಿ ಸರ್ಕಾರದ ನಿರ್ಧಾರಕ್ಕೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಸೌದಿ ಸರ್ಕಾರದ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಪ್ರಧಾನಿಯವರು ಹೇಳಿದ್ದಾರೆ ಎಂದು ಅವರು ಹೇಳಿದರು. ಕೋವಿಡ್ ಹರಡುವಿಕೆಯ ಹಿನ್ನೆಲೆಯಲ್ಲಿ , ಸೌದಿ ಅರೇಬಿಯಾ ಕಳೆದ ವರ್ಷ ಭಾರತ ಸೇರಿದಂತೆ ವಿದೇಶಗಳಿಂದ ಹಜ್ ಯಾತ್ರಾರ್ಥಿಗಳನ್ನು ನಿಷೇಧಿಸಿತ್ತು.
ಈ ವರ್ಷ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮತ್ತು ಹೊಸ ರೂಪಾಂತರಗಳ ಬಗ್ಗೆ ಕಳವಳ ವ್ಯಕ್ತವಾಗುತ್ತಿರುವುದರಿಂದ ಹಜ್ ಯಾತ್ರಿಕರ ಸಂಖ್ಯೆ ಈ ಬಾರಿ ಸೀಮಿತವಾಗಿರುವ ಸಾಧ್ಯತೆ ಇದೆ.