ಬೆಂಗಳೂರು: ಯಾವುದೇ ಧರ್ಮವನ್ನು ಪ್ರತಿಪಾದಿಸುವಾಗ ಮತ್ತೊಂದು ಧರ್ಮವನ್ನು ಕೀಳಾಗಿ ಬಿಂಬಿಸುವ ಮೂಲಭೂತ ಹಕ್ಕನ್ನು ಯಾವ ಧರ್ಮಕ್ಕೂ ಪ್ರದಾನ ಮಾಡಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಬಂಟ್ವಾಳದ ಪ್ರೆಸಿಲ್ಲಾ ಡಿಸೋಜ ಹಾಗೂ ಮಂಗಳೂರಿನ ಸ್ಯಾಮ್‌ಸನ್ ಜಾನ್, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಬಂಟ್ವಾಳ ನ್ಯಾಯಾಲಯ ತಮ್ಮ ವಿರುದ್ಧ ಕಾಗ್ನಿಜೆನ್ಸ್ ಪಡೆದು ವಿಚಾರಣೆ ಕೈಗೆತ್ತಿಕೊಂಡಿರುವ ಕ್ರಮ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ವಿಚಾರಣೆ ನಡೆಸಿದ ನ್ಯಾ. ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ಪೀಠ ತನ್ನ ತೀರ್ಪಿನಲ್ಲಿ ಈ ಆರೋಪಿತರ ವಿರುದ್ಧ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪವಿದೆ.
ಭಗವದ್ಗೀತೆ ಹಾಗೂ ಖುರಾನ್‌ನಲ್ಲಿ ಹೇಳಿರದ ವಿಷಯಗಳನ್ನು ಬೈಬಲ್‌ನಲ್ಲಿ ಹೇಳಿದ್ದು, ಭೂಮಿಗೆ ಸುನಾಮಿ ಬಂದಾಗ ಏಸು ಮಾತ್ರ ಕಾಪಾಡುತ್ತಾರೆ. ಬೈಬಲ್ ಮಾತ್ರ ಶಾಂತಿ ನೀಡುತ್ತದೆ ಎಂದು ಆರೋಪಿಗಳು ಹೇಳಿದ್ದಾರೆಂದು ಪೊಲೀಸರು ಐಪಿಸಿ ಸೆಕ್ಷನ್ 298ರಡಿ ಎಫ್‌ಐಆರ್ ದಾಖಲಿಸಿದ್ದಾರೆ. ಅರ್ಜಿದಾರರು ಈ ಕ್ರಮವನ್ನು ಸಂವಿಧಾನದ ವಿಧಿ 14, 21 ಹಾಗೂ 25ರ ಉಲ್ಲಂಘನೆ ಎಂದು ಪ್ರತಿಪಾದಿಸಿದ್ದಾರೆ.
ಆದರೆ, ಯಾವುದೇ ಧರ್ಮದ ಕುರಿತು ಧಾರ್ಮಿಕ ಮುಖಂಡ ಅಥವಾ ವ್ಯಕ್ತಿ ಪ್ರತಿಪಾದಿಸುವಾಗ ಮತ್ತೊಂದು ಧರ್ಮವನ್ನು ಕೀಳಾಗಿ ಬಿಂಬಿಸುವ ಹಕ್ಕನ್ನು ಮೂಲಭೂತ ಹಕ್ಕುಗಳಲ್ಲಿ ನೀಡಲಾಗಿಲ್ಲ ಎಂದು ನ್ಯಾಯಪೀಠ ಹೇಳಿದೆ. ಮಧುರಾ ಎಂಬುವರು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ನೀಡಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ