ಬೆಳ್ತಂಗಡಿ,ಜೂ 8: ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಖಂಡಿಸಿ ರಾಜ್ಯಾದ್ಯಂತ 100 ಕಡೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಇದರ ಭಾಗವಾಗಿ ಬೆಳ್ತಂಗಡಿ ಜಿಲ್ಲೆಯ ಪುಂಜಾಲಕಟ್ಟೆ, ಮದ್ದಡ್ಕ, ಉಜಿರೆ ಯೂನಿಟ್ ವ್ಯಾಪ್ತಿಯಲ್ಲಿ ಪ್ರತಿಭಟಿಸಲಾಯಿತು. ಜಿಲ್ಲಾ ನಾಯಕರು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ತೊಂದರೆಗಳನ್ನು ವಿವರಿಸಿದರು. ಪ್ರತಿಭಟನಾ ವಿದ್ಯಾರ್ಥಿಗಳು ಪ್ಲೇ ಕಾರ್ಡ್ ಪ್ರದರ್ಶಿಸುವ ಮೂಲಕ ಸರಕಾರದ ನೀತಿಯ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ನಾಯಕರಾದ ಬಾಕಿರ್, ತಂಝೀಲ್, ಅನ್ಸಾಫ್, ಅಲ್ತಾಫ್, ಅಝ್ಹಾಮ್ ಮತ್ತು ಯುನಿಟ್ ನಾಯಕರು ಉಪಸ್ಥಿತರಿದ್ದರು.