ಉಡುಪಿ,ಜೂನ್ 10: ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ದ’ಅವಾ ವಿಭಾಗದಿಂದ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ರಾಜ್ಯಾದ್ಯಂತ ಜಿಲ್ಲಾಮಟ್ಟದಲ್ಲಿ ಮುತಅಲ್ಲಿಮರಿಗಾಗಿ ಅಧ್ಯಾತ್ಮಿಕ ನಾಯಕ ಶೈಖ್ ಝೈನುದ್ಧೀನ್ ಮಖ್ದೂಂ(ರ) ರವರ ಸ್ಮರಣಾರ್ಥ ಹಮ್ಮಿಕೊಂಡಿರುವ “ಮಖ್ದೂಮಿಯ ಸಮ್ಮಿಟ್” ವಿವಿಧ ವಿದ್ವಾಂಸರ ತರಗತಿಗಳೊಂದಿಗೆ ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷರಾದ ಅಹ್ಮದ್ ಶಬೀರ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ಜೂನ್ 10,12,14 ಮೂರು ದಿನಗಳಲ್ಲಿ ನಡೆಯಲಿದೆ.
ಕಾರ್ಯಕ್ರಮದ ಮೊದಲ ದಿನ ಇಂದು (ಜೂನ್ 10) ಶಿಹಾಬುದ್ದೀನ್ ತಂಙಳ್ ಮದಕ ರವರು ದುಆ ದೊಂದಿಗೆ ಚಾಲನೆ ನೀಡುವರು. ಉಡುಪಿ ಜಿಲ್ಲಾ ಸಂಯುಕ್ತ ಸಹಾಯಕ ಖಾಝಿ ಅಲ್ಹಾಜ್ ಬಿಕೆ ಅಬ್ದುರ್ರಹ್ಮಾನ್ ಮದನಿ ಮೂಳೂರು ಉದ್ಘಾಟಿಸಲಿದ್ದಾರೆ. ಮುಹಮ್ಮದ್ ಬಾದುಷಾ ಸಖಾಫಿ ತಂಙಳ್ ಆಲಪ್ಪುಝ ವಿಷಯ ಮಂಡಿಸಲಿದ್ದಾರೆ. ಜಿಲ್ಲಾ ದ’ಅವಾ ಕನ್ವೀನರ್ ಸಿದ್ದೀಕ್ ಸಖಾಫಿ ಹಂಗಳೂರು ಸ್ವಾಗತಿಸುವರು.
ಕ್ಯಾಂಪಸ್ ಕಾರ್ಯದರ್ಶಿ ಶಾಹುಲ್ ನ’ಈಮಿ ವಂದಿಸುವರು. ಜಿಲ್ಲಾ ಪ್ರ.ಕಾರ್ಯದರ್ಶಿ ಎಂ.ಕೆ ಇಬ್ರಾಹಿಂ ಮಜೂರ್ ನಿರೂಪಿಸಲಿದ್ದಾರೆ. ಕಾರ್ಯಕ್ರಮವು ರಾತ್ರಿ 9 ರಿಂದ ಝೂಂ ಹಾಗೂ ಯ್ಯೂಟೂಬ್ ಮೂಲಕ ನಡೆಯಲಿದೆ.
ಜಿಲ್ಲೆಯ 5 ಡಿವಿಷನ್ ವ್ಯಾಪ್ತಿಯ ಹಲವಾರು ಮುತಅಲ್ಲಿಮರು ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ. ಎಂದು SSF ಜಿಲ್ಲಾ ದಅವಾ ಕಾರ್ಯದರ್ಶಿ ಮಜೀದ್ ಹನೀಫಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ