ಬೆಂಗಳೂರು: ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಪರೀಕ್ಷೆ ಮಾಡುವಂತೆ ಎಲ್ಲಾ ಕಾಲೇಜುಗಳಿಗೆ ಪಿಯು ಬೋರ್ಡ್ ಸುತ್ತೋಲೆ ನೀಡಿದೆ. ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ 2 ವಿಷಯಗಳಿಗೆ ಪರೀಕ್ಷೆ ನಡೆಸಲು ಬೋರ್ಡ್ ಸೂಚನೆ ನೀಡಿದೆ. ಈ ಮೊದಲು ಪ್ರಥಮ ಪಿಯುಸಿ ಪಾಸ್ ಎಂದು ಶಿಕ್ಷಣ ಸಚಿವರು ತಿಳಿಸಿದ್ದರೂ ಸಹ, ಆನ್ ಲೈನ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಪಿಯು ಬೋರ್ಡ್ 2 ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್ಸೈಟ್ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿದೆ.
ಪ್ರಥಮ ಪಿಯುಸಿಗೆ ಆನ್ ಲೈನ್ ಪರೀಕ್ಷೆ ಹೇಗೆ?
- ಇಲಾಖೆ ವೆಬ್ ಸೈಟ್ ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳೇ ಡೌನ್ ಲೋಡ್ ಮಾಡಿಕೊಳ್ಳಬೇಕು
- ಪ್ರಶ್ನೆಗಳಿಗೆ ಉತ್ತರ ಬರೆದು ವಾಟ್ಸ್ ಅಪ್, ಇ–ಮೇಲ್, ಅಂಚೆ ಮೂಲಕ ರವಾನಿಸಬೇಕು
- ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಉತ್ತರ ಪತ್ರಿಕೆಯನ್ನು ಕಳುಹಿಸಬೇಕು.
- ಉಪನ್ಯಾಸಕರು ಮೌಲ್ಯಮಾಪನ ಮಾಡಬೇಕು.
- ಮೌಲ್ಯಮಾಪನದ ಬಳಿಕ ಉಪನ್ಯಾಸಕರು SATs (ಸ್ಟೂಡೆಂಟ್ಸ್ ಅಚಿವ್ ಮೆಂಟ್ ಟ್ರಾಕಿಂಗ್ ಸಿಸ್ಟಂ) ಮೂಲಕ ಫಲಿತಾಂಶ ಅಪ್ಲೋಡ್ ಮಾಡಬೇಕು.
- ಅಸಿಸ್ಮೆಂಟ್ ಲೆಕ್ಕಾಚಾರದಲ್ಲಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ನಿರ್ಧಾರ ಕೈಗೊಂಡಿದೆ.
ಮೊದಲ ಅಸಿಸ್ಮೆಂಟ್ ಜೂ.20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂ.25ರೊಳಗೆ ಮೌಲ್ಯಮಾಪನ ಮಾಡಿರಬೇಕು. ಅದೇ ರೀತಿ ಎರಡನೇ ಅಸಿಸ್ಮೆಂಟ್ ಜೂನ್ 26 ರಿಂದ ಜುಲೈ 5ರ ಒಳಗೆ ನಡೆಸಬೇಕು.
ಉಪನ್ಯಾಸಕರು ಜುಲೈ 10ರೊಳಗೆ ಮೌಲ್ಯಮಾಪನ ಮಾಡಿರಬೇಕು. 2 ಪತ್ರಿಕೆಗಳ ಅಂಕವನ್ನು ಸಮೀಕರಣ ಮಾಡಿ ಜುಲೈ 15 ರೊಳಗೆ ಮುಗಿಸಿ, ಜುಲೈ 20ರೊಳಗೆ ಸ್ಯಾಟ್ಸ್ ನಲ್ಲಿ ಅಪ್ಲೋಡ್ ಮಾಡಿರಬೇಕು. ಎರಡೂ ಪರೀಕ್ಷೆಗಳ ಅಂಕವನ್ನು ಜುಲೈ 20ರೊಳಗೆ ಅಪ್ಲೋಡ್ ಮಾಡಲು ಡೆಡ್ ಲೈನ್ ವಿಧಿಸಲಾಗಿದೆ.
ಮೌಲ್ಯಮಾಪನ ಪ್ರಕ್ರಿಯೆ ಹೇಗೆ ಮಾಡ್ಬೇಕು?
ವಿದ್ಯಾರ್ಥಿಗಳಿಗೆ ಪ್ರತೀ ವಿಷಯದಲ್ಲಿ ಕನಿಷ್ಠ 35 ಅಂಕ ಕಡ್ಡಾಯವಾಗಿ ನೀಡಬೇಕು. ಪ್ರತಿ ಪತ್ರಿಕೆಗೆ 30 ರಂತೆ 2 ಪತ್ರಿಕೆಗೆ 60 ಅಂಕ ನೀಡಬೇಕು. 5 ಅಂಕವನ್ನ ಉಪನ್ಯಾಸಕರು ಆಂತರಿಕ ಅಂಕವೆಂದು ನೀಡಬೇಕು. ಪ್ರಯೋಗ ಸಹಿತಿ ವಿಷಯಗಳಿಗೆ ಪ್ರತ್ಯೇಕ ಅಂಕ ನೀಡಬೇಕಿದೆ. ಈ ಹಿಂದೆ ನಡೆಸಿದ ಪ್ರಾಯೋಗಿಕ ತರಗತಿಗಳ ಆಧಾರದ ಮೇಲೆ ನಿಷ್ಪಕ್ಷಪಾತವಾಗಿ ಅಂಕ ನೀಡಬೇಕು ಎಂದು ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ಪಿಯು ಬೋರ್ಡ್ ನಿಂದ ಸುತ್ತೋಲೆ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ