ಬೆಳ್ತಂಗಡಿ, ಜೂ.16: ದಿನಂದಿಂದ ದಿನಕ್ಕೆ ಇಂಧನ ತೈಲ ಬೆಲೆಯೇರಿಕೆಯಾಗಿ ಇದೀಗ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿರುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವತಿಯಿಂದ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ, ಕಲ್ಲೇರಿ, ಮದ್ದಡ್ಕ, ಕೊಕ್ಕಡ, ಕುಪ್ಪೆಟ್ಟಿ ಮುಂತಾದ ನಗರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರಕಾರದ ವಿರುದ್ಧ ಪೆಟ್ರೋಲ್ ಬಂಕ್ ಗಳ ಎದುರು ವಾಹನಗಳಿಗೆ ಹಗ್ಗ ಕಟ್ಟಿ ಎಳೆದು, ಸೈಕಲ್ ತುಳಿದು, ಭಿತ್ತಿ ಪತ್ರ ಪ್ರದರ್ಶಿಸಿ, ಘೋಷಣೆ ಕೂಗಿ ವಿಭಿನ್ನ ಶೈಲಿಯಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವಿವಿದ ಕಡೆ ಗಳಲ್ಲಿ ನಡೆದ ಈ ಪ್ರತಿಭಟನೆಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಹನೀಫ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಫೈಝಲ್ ಮುರುಗೋಳಿ,ರಿಯಾಜ್ ಕುವೆಟ್ಟು, ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಸಮಿತಿಯ ಉಪಾಧ್ಯಕ್ಷ ಶುಕೂರ್ ಕುಪ್ಪೆಟ್ಟಿ, ಸದಸ್ಯರಾದ ಅಶ್ಫಾಕ್ ಪುಂಜಾಲಕಟ್ಟೆ, ಸಾಲಿ ಮದ್ದಡ್ಕ, ಮಜೀದ್ ಪುಂಜಾಲಕಟ್ಟೆ, ನವಾಜ್ ಕುದ್ರಡ್ಕ,ಅಝೀಜ್, ಆಸೀಫ್ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ