ದುಬೈ,ಜೂ.20: ದುಬೈ ಪ್ರವೇಶಾನುಮತಿಯ ನಿಯಮಗಳಲ್ಲಿ ಅನಿಶ್ಚಿತತೆ ಮುಂದುವರಿದಿದ್ದು, ಭಾರತೀಯ ವಿಮಾನಯಾನ ಸಂಸ್ಥೆಗಳು ಟಿಕೆಟ್ ಬುಕಿಂಗ್ ಸ್ಥಗಿತಗೊಳಿಸಿದ.
ರಾಪಿಡ್ ಟೆಸ್ಟ್ ಮತ್ತು ಇತರ ಸಮಸ್ಯೆಗಳಲ್ಲಿನ ಅನಿಶ್ಚಿತತೆಯಿಂದಾಗಿ ಬುಕಿಂಗ್ ಅನ್ನು ಸ್ಥಗಿತಗೊಳಿಸಲಾಗಿದೆ. ನಿರ್ಗಮನಕ್ಕೆ ನಾಲ್ಕು ಗಂಟೆಗಳ ಮುಂಚಿತವಾಗಿ ಕೋವಿಡ್ ರಾಪಿಡ್ ಟೆಸ್ಟ್ ರಿಪೋರ್ಟನ್ನು ಕಡ್ಡಾಯಗೊಳಿಸಲಾಗಿದೆ. ಆದರೆ, ಅದನ್ನು ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಕಾರ್ಯಗತಗೊಳಿಸುವ ಪ್ರಾಯೋಗಿಕ ಅಡಚಣೆಗಳು ವಿಮಾನಯಾನ ಸಂಸ್ಥೆಗಳಿಗೆ ತಡೆಯಾಗಿದೆ.
ಇದಲ್ಲದೆ, ಅಬುಧಾಬಿ ಮತ್ತು ಶಾರ್ಜಾ ವೀಸಾ ಹೊಂದಿರುವವರು ದುಬೈಗೆ ಪ್ರಯಾಣಿಸಲು ಅವಕಾಶವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಲ್ಲದೆ, 18 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ಕಡ್ಡಾಯವಿದೆಯೇ ಎಂಬುದು ಸ್ಪಷ್ಟವಾಗಿಲ್ಲ.
ಭಾರತೀಯ ವಿಮಾನಯಾನ ಸಂಸ್ಥೆಯಾದ ಇಂಡಿಗೊ ಬುಕಿಂಗ್ ಪ್ರಾರಂಭಿಸಿತ್ತು. ಟಿಕೆಟ್ಗಳು 900 ದಿರ್ಹಮ್ಗಳಿಂದ ಪ್ರಾರಂಭವಾಗಿ 1800 ದಿರ್ಹಾಮ್ಗಳ ವರೆಗೆ ಏರಿಕೆ ಕಂಡಿತ್ತು. ಆ ಸಮಯದಲ್ಲೇ ಬುಕಿಂಗ್ ತಕ್ಷಣವೇ ನಿಲ್ಲಿಸಲಾಗುವುದು ಎಂಬ ಪ್ರಕಟಣೆ ಬಂದಿದೆ. ಇತರ ವಿಮಾನಯಾನ ಸಂಸ್ಥೆಗಳಿಗೂ ಇದೇ ರೀತಿಯ ಅನಿಶ್ಚಿತತೆಗಳು ಅಸ್ತಿತ್ವದಲ್ಲಿವೆ. ದುಬೈಗೆ ಪ್ರವೇಶಾನುಮತಿ ಬುಧವಾರದಿಂದ ಜಾರಿಯಾಗಲಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು