ಬೆಂಗಳೂರು,ಜೂ.21: ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ರಾಜ್ಯದ 28 ಜಿಲ್ಲೆಗಳಲ್ಲಿ ಸೋಮವಾರದಿಂದ ಸರಕಾರಿ ಬಸ್ ಸಂಚಾರ ಮರು ಆರಂಭವಾಗಲಿದೆ. ಮೊದಲ ದಿನ ಶೇ. 34ರಷ್ಟು ಬಸ್ಗಳು ಓಡಾಟ ಆರಂಭಿಸಲಿದ್ದು, ಜನರ ಒತ್ತಡ ಗಮನಿಸಿ ಅದನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ನಡುವೆ, ಖಾಸಗಿ ಬಸ್ ಸಂಚಾರ ಸದ್ಯಕ್ಕೆ ಆರಂಭವಾಗುವುದಿಲ್ಲಎಂದು ಮಾಲೀಕರ ಸಂಘಟನೆ ಹೇಳಿದೆ. ಆದರೆ, ಹೆಚ್ಚಿನ ಕಡೆಗಳಲ್ಲಿ ಸಂಚಾರಕ್ಕೆ ಸಿದ್ಧತೆಗಳು ನಡೆದಿವೆ.
ಮೈಸೂರು ಜಿಲ್ಲೆಯಲ್ಲಿ ಕಠಿಣ ನಿರ್ಬಂಧಗಳಿರುವುದರಿಂದ ಮತ್ತು ದಕ್ಷಿಣ ಕನ್ನಡದಲ್ಲಿ ಸೋಂಕು, ಸಾವಿನ ಸಂಖ್ಯೆ ಇನ್ನೂ ಹೆಚ್ಚಿರುವುದರಿಂದ ಇಲ್ಲಿ ಬಸ್ ಸಂಚಾರ ಆರಂಭಿಸುವುದಿಲ್ಲಎಂದು ಕೆಎಸ್ಸಾರ್ಟಿಸಿ ತಿಳಿಸಿದೆ. ಈ ಎರಡೂ ಜಿಲ್ಲೆಗಳ ಮೂಲಕ ಸಾಗುವ ದೂರ ಮಾರ್ಗದ ಬಸ್ಗಳಿಗೆ ಇಲ್ಲಿನ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಇಳಿಸಲು, ಹತ್ತಿಸಿಕೊಳ್ಳಲು ಅವಕಾಶವಿರುವುದಿಲ್ಲ.
ಸಮಯ ಪೂರಕ ಸಂಚಾರ: 16 ಜಿಲ್ಲೆಗಳಲ್ಲಿಸಂಜೆ 5 ಗಂಟೆವರೆಗೆ, 12 ಜಿಲ್ಲೆಗಳಲ್ಲಿಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯವಹಾರವಿರುತ್ತದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ