ಕರ್ನಾಟಕ ಕಲ್ಚರಲ್ ಫೌಂಡೇಶನ್, ಮಧ್ಯಪ್ರಾಚ್ಯ, ಮಲೇಷ್ಯಾ, ಯುರೋಪ್ ಮತ್ತು ಬ್ರಿಟನ್ನ ಕನ್ನಡಿಗರ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆ ಮತ್ತು ವಿವಿಧ ಸಾಮಾಜಿಕ ಸೇವೆಗಳಲ್ಲಿಸಕ್ರಿಯವಾಗಿ ತೊಡಗಿಸಿಕೊಂಡಿದೆ.
ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾರ್ಥಿವೇತನ, ಅಗತ್ಯವಿರುವವರಿಗೆ ವೈದ್ಯಕೀಯ ನೆರವು, ಸಾರ್ವಜನಿಕ ಆಂಬುಲೆನ್ಸ್ ಸೇವೆ, ಆಹಾರ ಕಿಟ್, ವಸತಿ ಯೋಜನೆ, ಬಡ ಹೆಣ್ಣು ಮಕ್ಕಳ ಕಲ್ಯಾಣ ಯೋಜನೆ ಮುಂತಾದ ಸಾಮಾಜಿಕ ಶೈಕ್ಷಣಿಕ ಸೇವೆಗಳ ಮೂಲಕ ಕೆಸಿಎಫ್ ಗುರುತಿಸಿಕೊಂಡಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಸಂಕಷ್ಟಕ್ಕೊಳಗಾದ ಗರ್ಭಿಣಿ ಮಹಿಳೆಯರನ್ನು, ಸಂದರ್ಶನ ವೀಸಾವಧಿ ಮುಗಿದ ಪ್ರವಾಸಿಗರನ್ನು, ಚಿಕಿತ್ಸೆ ಅನಿವಾರ್ಯವಿರುವ ರೋಗಿಗಗಳನ್ನು ಹಾಗೂ ವಿದ್ಯಾರ್ಥಿಗಳನ್ನು ಸೇರಿ ಎರಡು ಸಾವಿರದಷ್ಟು ಕನ್ನಡಿಗರನ್ನು ಚಾರ್ಟರ್ ವಿಮಾನಗಳ ಮೂಲಕ ಜಿಸಿಸಿಯಿಂದ ತಾಯ್ನಾಡಿಗೆ ತಲುಪಿಸಿಕೊಟ್ಟಿದೆ.
ಯುಕೆ ಲಂಡನ್ ಕೆಸಿಎಫ್ 2021-22 ಯುಕೆ ಸಮಿತಿಯ ನವ ಸಾರಥಿಗಳ ಘೋಷಣೆಯಾಗಿದ್ದು ಈ ಕೆಳಗಿನಂತೆ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ರಫೀಕ್ ಹಳೆಯಂಗಡಿ, ಉಪಾಧ್ಯಕ್ಷರಾಗಿ ರಹೀಮ್ ಬೈಕಂಪಾಡಿ ಮತ್ತು ಅಬ್ಬಾಸ್ ಮಕ್ಯಾರ್, ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸದಕತುಲ್ಲಾಹ್ ಮತ್ತು ಜೊತೆ ಕಾರ್ಯದರ್ಶಿಯಾಗಿ ಇರ್ಫಾನ್, ಫೈರೋಜ್ ಕೋಶಾಧಿಕಾರಿಯಾಗಿ ಆಸಿಫ್ ಬಜ್ಪೆ ಯವರನ್ನು ಆಯ್ಕೆ ಮಾಡಲಾಗಿದೆ.
ಕೆಸಿಎಫ್ ವಿದ್ಯಾರ್ಥಿ ವಿಂಗ್ ರಚನೆ ಮಾಡಿದ್ದು ಅಧ್ಯಕ್ಷರಾಗಿ ಹಫೀಜ್ ಅಹ್ಮದ್, ಉಪಾಧ್ಯಕ್ಷರಾಗಿ ಫೈಝಲ್, ಪ್ರಧಾನ ಕಾರ್ಯದರ್ಶಿಯಾಗಿ ಬದ್ರುದ್ದೀನ್ ರವರನ್ನು ಆಯ್ಕೆ ಮಾಡಿ ಘೋಷಣೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಅಶ್ರಫ್ ಅಮಾನಿ ಲಂಡನ್, ಅರ್ಶಕ್ ನೂರಾನಿ ಲಂಡನ್ ಮತ್ತು ರಹೀಮ್ ಸ-ಆದಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ