ಬೆಂಗಳೂರು: ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗಾಗಿ, ಭಾನುವಾರ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ.
ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್
ಬಂಗಾಳ ಉಪಸಾಗರದ ಪಶ್ಚಿಮ ಮಧ್ಯ ಭಾಗದಲ್ಲಿ ಭಾನುವಾರ ವಾಯುಭಾರ ಕುಸಿತ ಆಗಲಿದೆ. ಇದರಿಂದ ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 14ರ ತನಕ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಭಾನುವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 12 ಮತ್ತು 13 ರಂದು ಆರೆಂಜ್ ಅಲರ್ಟ್ ಹಾಗೂ ಜುಲೈ 14 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಗೆ ಶನಿವಾರದಿಂದ ಆರೆಂಜ್ ಅಲರ್ಟ್, ನಾಡದೋಣಿ ಮೀನುಗಾರಿಕೆ ಕೂಡ ಸ್ಥಗಿತ
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಿಜಾಪುರ, ಯಾದಗಿರಿ, ರಾಯಚೂರು, ಬೀದರ್, ಕಲಬುರಗಿ ಹಾಗೂ ಚಾಮರಾಜನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 14ರವರೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ