ನವದೆಹಲಿ: ಕೊಲ್ಲಿ ರಾಷ್ಟ್ರಗಳ ಮೇಲಿನ ಪ್ರಯಾಣ ನಿಷೇಧವನ್ನು ತೆಗೆದುಹಾಕಲು ಭಾರತ ರಾಜತಾಂತ್ರಿಕ ಒತ್ತಡವನ್ನು ಹೆಚ್ಚಿಸಿದೆ.
ದೇಶದಲ್ಲಿ ಕೋವಿಡ್ ಹರಡುವಿಕೆ ಇಳಿಕೆಯಾಗಿರುವ ಪರಿಸ್ಥಿತಿಯನ್ನು ಕೊಲ್ಲಿ ರಾಷ್ಟ್ರಗಳಿಗೆ ಮನವರಿಕೆ ಮಾಡಿಕೊಡುವಂತೆ ಕೇಂದ್ರ ವಿದೇಶಾಂಗ ಸಚಿವಾಲಯ ರಾಯಭಾರಿಗಳಿಗೆ ನಿರ್ದೇಶನ ನೀಡಿದೆ. ಲಸಿಕೆ ಹಾಕಿದ ವಲಸಿಗರಿಗೆ ಕೂಡಲೇ ಕೊಲ್ಲಿಗೆ ಮರಳಲು ಅವಕಾಶ ನೀಡಬೇಕೆಂದು ಭಾರತ ಒತ್ತಾಯಿಸುತ್ತಿದೆ.
ಕೊಲ್ಲಿ ರಾಷ್ಟ್ರಗಳ ಉಸ್ತುವಾರಿ ಹೊಂದಿರುವ, ಕೇಂದ್ರ ವಿದೇಶಾಂಗ ಖಾತೆಯ ರಾಜ್ಯ ಸಚಿವ ಮುರಲೀಧರನ್ ಅವರು ಭಾರತೀಯ ರಾಯಭಾರಿಗಳ ಸಭೆಯನ್ನು ಆನ್‌ಲೈನ್‌ನಲ್ಲಿ ಕರೆದು ಈ ವಿಷಯ ತಿಳಿಸಿದರು. ಹಲವು ತಿಂಗಳುಗಳ ಪ್ರಯಾಣ ನಿಷೇಧದ ಸಂದರ್ಭದಲ್ಲಿ ಕೇಂದ್ರದಿಂದ ಯಾವುದೇ ಒತ್ತಡವಿಲ್ಲ ಎಂದು ಆರೋಪಗಳು ಕೇಳಿಬಂದಿತ್ತು.
ಆದಷ್ಟು ಬೇಗ ಆಯಾ ಕೊಲ್ಲಿ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸುವಂತೆ ಕೇಂದ್ರ ಸರ್ಕಾರ ರಾಯಭಾರಿಗಳಿಗೆ ಸೂಚಿಸಿದೆ. ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಂ ಬಾಗ್ಶಿ ಅವರು, ಗಲ್ಫ್ ರಾಷ್ಟ್ರಗಳಿಗೆ ಪ್ರಯಾಣ ನಿಷೇಧವನ್ನು ತೆಗೆದುಹಾಕುವಂತೆ ಮನವೊಲಿಸಲು ಸಾಧ್ಯವಾಗಲಿದೆ ಎಂದು ಹೇಳಿದರು. ವಿದೇಶಾಂಗ ಕಾರ್ಯದರ್ಶಿ ಹರ್ಷ್ ವರ್ಧನ್ ಅವರ ನೇತೃತ್ವದಲ್ಲಿ ವಿದೇಶಗಳೊಂದಿಗೆ ಚರ್ಚೆಯನ್ನು ಮುಂದುವರಿಸುವುದಾಗಿ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಭಾರತದಿಂದ ವಿಮಾನ ಹಾರಾಟವನ್ನು ಯುಎಇಯಲ್ಲಿ ಏಪ್ರಿಲ್ 25 ರಿಂದ ನಿಷೇಧಿಸಲಾಗಿದೆ. ಕತಾರ್ ಹೊರತುಪಡಿಸಿ ಎಲ್ಲಾ ಕೊಲ್ಲಿ ರಾಷ್ಟ್ರಗಳಲ್ಲಿ ಭಾರತೀಯ ವಿಮಾನಗಳನ್ನು ತಿಂಗಳುಗಟ್ಟಲೆ ನಿಷೇಧಿಸಲಾಗಿದೆ. ಶೀಘ್ರದಲ್ಲೇ ನಿಷೇಧವನ್ನು ತೆಗೆದುಹಾಕುವ ಆಶಯವನ್ನು ಕೇಂದ್ರ ವಿದೇಶಾಂಗ ಸಚಿವಾಲಯವು ಹೊಂದಿದೆ.
ಪ್ರಯಾಣ ನಿಷೇಧದ ಬಿಕ್ಕಟ್ಟಿನ ಬಗ್ಗೆ ಗಲ್ಫ್‌ನ ಭಾರತೀಯ ರಾಯಭಾರಿಗಳು ಚರ್ಚಿಸುತ್ತಿರುವುದು ಇದು ಎರಡನೇ ಬಾರಿ. ಕಳೆದ ತಿಂಗಳು ಕೇಂದ್ರ ವಿದೇಶಾಂಗ ಸಚಿವ ಡಾ. ಎಸ್ ಜಯಶಂಕರ್ ಅವರ ಕುವೈತ್ ಭೇಟಿಯ ಸಂದರ್ಭದಲ್ಲಿ ಗಲ್ಫ್ ರಾಯಭಾರಿಗಳು ಪ್ರಯಾಣ ನಿಷೇಧದ ಬಗ್ಗೆ ಚರ್ಚಿಸಿದ್ದರು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್