ಮಂಗಳೂರು: ರಾಜ್ಯಾದ್ಯಂತ ಜು.21ರಂದು ನಡೆಯುವ ಬಕ್ರೀದ್ ಹಬ್ಬಕ್ಕೆ ಸಂಬಂಧಿಸಿ ಕೋವಿಡ್-19 ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ನಿರ್ದೇಶನದಂತೆ ರಾಜ್ಯ ಸರಕಾರವು ಕೆಲವೊಂದು ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಬಕ್ರೀದ್ ದಿನದಂದು ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ (ನಮಾಝ್)ಗೆ ನಿರ್ಬಂಧ ಹೇರಲಾಗಿದೆ. ಮಸೀದಿಗಳಲ್ಲಿ 50 ಮಂದಿಗಿಂತ ಹೆಚ್ಚು ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು. ಒಂದು ವೇಳೆ ಅಧಿಕ ಮಂದಿ ಮಸೀದಿಗೆ ಆಗಮಿಸಿದರೆ ಹಂತ ಹಂತವಾಗಿ ನಮಾಝ್ ನಿರ್ವಹಿಸಲು ಅವಕಾಶ ಕಲ್ಪಿಸಬಹುದಾಗಿದೆ.
ಮಸೀದಿಗಳಲ್ಲಿ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕು, 65 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷ ಕಡಿಮೆ ವಯಸ್ಸಿನ ಮಕ್ಕಳು ಮಸೀದಿಗೆ ತೆರಳಬಾರದು. ನಮಾಝ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರವಿರಬೇಕು. ಮಸೀದಿಗೆ ಪ್ರವೇಶಿಸುವ ಮುನ್ನ ದೇಹದ ತಾಪಮಾನ ತಪಾಸಣೆ ಮಾಡಬೇಕು. ಕೈಗಳನ್ನು ಸೋಪ್ ಅಥವಾ ಸ್ಯಾನಿಟೈಝರ್ನಿಂದ ಶುಚಿಗೊಳಿಸಬೇಕು. ಮನೆಯಿಂದಲೇ ಮುಸಲ್ಲಾವನ್ನು ಕೊಂಡೊಯ್ಯಬೇಕು. ಹಸ್ತಲಾಘವ ಮತ್ತು ಆಲಿಂಗನ ಮಾಡಬಾರದು ಎಂದು ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.
ರಸ್ತೆಗಳು, ಪಾದಚಾರಿ ಮಾರ್ಗಗಳು, ಎಲ್ಲಾ ರೀತಿಯ ಆಸ್ಪತ್ರೆಯ ಆವರಣಗಳು, ನರ್ಸಿಂಗ್ ಹೋಂ ಒಳ ಮತ್ತು ಹೊರ ಆವರಣಗಳು, ಶಾಲಾ ಕಾಲೇಜುಗಳಲ್ಲಿ ತರಗತಿ ನಡೆಯುತ್ತಿದ್ದಲ್ಲಿ ಅಂತಹ ಶಾಲಾ-ಕಾಲೇಜುಗಳ ಒಳ ಮತ್ತು ಹೊರ ಆವರಣಗಳಲ್ಲಿ, ಆಟದ ಮೈದಾನಗಳಲ್ಲಿ, ಮಸೀದಿ ಮತ್ತು ಇತರ ಧಾರ್ಮಿಕ ಸ್ಥಳ-ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ವಧೆ ಮತ್ತು ಬಲಿದಾನ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ