ಪುನಾ: ಭಾರತದ ಸೀರಂ ಸಂಸ್ಥೆಯ ಕೋವಿಡ್ ಲಸಿಕೆ ಕೋವಿಶೀಲ್ಡ್ಗೆ ಇದೀಗ ಒಟ್ಟು 16 ಯೂರೋಪಿಯನ್ ರಾಷ್ಟ್ರಗಳು ಮಾನ್ಯತೆ ನೀಡದೆ. ಇದರಿಂದ ಪ್ರಯಾಣಕರಿಗೆ ಯಾವುದೇ ಸಮಸ್ಯೆ ಇಲ್ಲದೆ 16 ರಾಷ್ಟ್ರಗಳಿಗೆ ಪ್ರಯಾಣ ಮಾಡಬುಹುದಾಗಿದೆ. 16 ಯುರೋಪಿಯನ್ ರಾಷ್ಟ್ರಗಳು ಈಗ ಕೋವಿಶೀಲ್ಡ್ ಅನ್ನು ಅಂತರರಾಷ್ಟ್ರೀಯ ಪ್ರಯಾಣಿಕರ ಪ್ರವೇಶಕ್ಕಾಗಿ ಗುರುತಿಸಿವೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದರ್ ಪೂನವಾಲ್ಲಾ ಹೇಳಿದ್ದಾರೆ.
ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಎರಡನ್ನೂ ಗುರುತಿಸಲು ಭಾರತೀಯ ಸರ್ಕಾರವು ಯುರೋಪಿಯನ್ ಯೂನಿಯನ್ ಸದಸ್ಯ ರಾಷ್ಟ್ರಗಳನ್ನು ಒತ್ತಾಯಿಸಿತ್ತು. ಲಸಿಕೆ ಫಲಿತಾಂಶ ಆಧರಿಸಿ ಯುರೋಪಿಯನ್ ರಾಷ್ಟ್ರಗಳು ಭಾರತದ ಲಸಿಕೆಗೆ ಪಡೆದವರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
ಜುಲೈ 1 ರಿಂದ ಯುರೋಪಿಯನ್ ಯೂನಿಯನ್ (EU) ಸದಸ್ಯ ರಾಷ್ಟ್ರಗಳು ಪ್ರಯಾಣಿಸಲು ಗ್ರೀನ್ ಪಾಸ್ ಪರಿಚಯಿಸಿತು. ಈ ಗ್ರೀನ್ ಪಾಸ್ ಪಡೆಯಲು ಫೈಜರ್, ಆಸ್ಟ್ರಜೆನಿಕಾ ಸೇರಿದಂತೆ ಕೆಲ ಲಸಿಕೆ ಪಡೆದವರಿಗೆ ಮಾತ್ರ ನೀಡಲಾಗುತ್ತಿತ್ತು. ಈ ಕುರಿತು ಕೇಂದ್ರ ಸರ್ಕಾರ EU ಮನವಿ ಮಾಡಿತ್ತು. ಬಳಿಕ ಭಾರತದ ಲಸಿಕೆ ಫಲಿತಾಂಶ ಆಧರಿಸಿ EU ರಾಷ್ಟ್ರಗಳು ತಮ್ಮ ನಿಲುವು ಬದಲಿಸಿತು.
ಕೋವಿಶೀಲ್ಡ್ ಗ್ರೀನ್ ಸಿಗ್ನಲ್ ನೀಡಿದ16 ದೇಶಗಳು
ಆಸ್ಟ್ರಿಯಾ, ಬೆಲ್ಜಿಯಂ, ಬಲ್ಗೇರಿಯಾ, ಫಿನ್ಲ್ಯಾಂಡ್, ಜರ್ಮನಿ, ಗ್ರೀಸ್, ಹಂಗೇರಿ, ಐಸ್ಲ್ಯಾಂಡ್, ಐರ್ಲೆಂಡ್, ಲಾಟ್ವಿಯಾ, ನೆದರ್ಲ್ಯಾಂಡ್, ಸ್ಲೊವೇನಿಯಾ, ಸ್ಪೇನ್, ಸ್ವೀಡನ್, ಸ್ವಿಟ್ಜರ್ಲೆಂಡ್ ಮತ್ತು ಫ್ರಾನ್ಸ್ ಈಗ ಕೋವಿಶೀಲ್ಡ್ ಅನ್ನು ಗುರುತಿಸುವ 16 ದೇಶಗಳಾಗಿವೆ. ಈ ಪೈಕಿ 13 ರಾಷ್ಟ್ರಗಳು ಯುರೋಪಿಯನ್ ಯೂನಿಯನ್ ಸದಸ್ಯತ್ವ ರಾಷ್ಟ್ರಗಳಾಗಿವೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ