ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ಹೆಚ್ಚಿನ ವಿದ್ಯಾರ್ಥಿಗಳು ಹೊರ ರಾಜ್ಯದವರಾಗಿದ್ದು,ಗಡಿ ಭಾಗದಲ್ಲಿ ಇದೀಗ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ಮುಂದಿನ ಆದೇಶದ ತನಕ ರದ್ದುಕೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ಆಗಮಿಸುತ್ತಿದ್ದು, ನೆರೆಯ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆಗಳಿವೆ. ಸಂಭಾವ್ಯ ಅಪಾಯವನ್ನು ತಪ್ಪಿಸಲು ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಇದರಿಂದಾಗಿ ಅಂತರ್ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವಿದ್ಯಾಭ್ಯಾಸಕ್ಕಾಗಿ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಕೂಡಾ ಅನಾನುಕೂಲವಾಗುವ ಸಾಧ್ಯತೆ ಇರುತ್ತದೆ.
ಪ್ರಸ್ತುತ ಸನ್ನಿವೇಶದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಹಾಗೂ ಯಾವುದೇ ವಿನಾಯಿತಿಯನ್ನು ನೀಡಲು ಅವಕಾಶವಿಲ್ಲದಿರುವುದರಿಂದ, ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಆದೇಶ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ