ಬೆಂಗಳೂರು,ಆ.14: ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭಕ್ಕೆ ಬೊಮ್ಮಾಯಿ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು. 9ರಿಂದ 12ನೇ ತರಗತಿ ವರೆಗೆ ಆ.23ರಿಂದ ಪ್ರಾರಂಭವಾಗಲಿವೆ.
ಇಂದು (ಆ.14) ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊರೋನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಪ್ರಾರಂಭಿಸಲಾಗುವುದು. ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಶಾಲೆಗಳ ಪ್ರಾರಂಭ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಒಂದು ವಾರ ಶಾಲೆಯನ್ನು ಮುಚ್ಚುವ ಜೊತೆಗೆ ಸ್ಯಾನಿಟೈಸ್ ಮಾಡಿ ವಾರದ ನಂತರ ಶಾಲೆ ಆರಂಭಿಸಲಾಗುವುದು. ಜಿಲ್ಲಾವಾರು ಪಾಸಿಟಿವಿಟಿ ದರ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಪೋಷಕರು, ಶಾಲೆಯ ಶಿಕ್ಷಕ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಸೆಪ್ಟೆಂಬರ್ 23 ರಂದು 9 ರಿಂದ 12 ನೇ ತರಗತಿವರೆಗೆ ಶಾಲೆ ತೆರೆಯಲು ಎಸ್ಓಪಿ ತಯಾರಿಸಲಾಗಿದೆ. ಸದ್ಯದಲ್ಲೇ ಬಿಡುಗಡೆ ಮಾಡ್ತೇವೆ ಎಂದು ಮಾಹಿತಿ ನೀಡಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ