ದೋಹಾ:ಕತಾರ್‌ಗೆ ಔಷಧಿಗಳೊಂದಿಗೆ ಪ್ರಯಾಣಿಸುವವರಿಗೆ ಕತಾರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಚ್ಚರಿಕೆಯನ್ನು ನೀಡಿದೆ.ನಿಷೇಧಿತ ಔಷಧಗಳನ್ನು ಹೊಂದಿಲ್ಲ ಎಂದು ಖಚಿತಪಡಿಸಿಕೊಂಡು, ಮಾನದಂಡಗಳನ್ನು ಕಟ್ಟುನಿಟ್ಟಿನಲ್ಲಿ ಪಾಲಿಸಿ ಕತಾರ್‌ಗೆ ಔಷಧಗಳನ್ನು ತರಬೇಕು ಎಂದು ಭಾರತೀಯ ರಾಯಭಾರ ಕಚೇರಿ ಹೇಳಿದೆ.
ವೈಯಕ್ತಿಕ ಬಳಕೆಗಾಗಿ ಕತಾರ್‌ನಲ್ಲಿ ಅನುಮತಿಸಲಾದ ಕೆಲವು ಪ್ರಮಾಣದ ಔಷಧಿಗಳನ್ನು ಮಾತ್ರ ಅನುಮತಿಸಲಾಗಿದೆ. ಪ್ರಯಾಣಿಕರು ತಮ್ಮೊಂದಿಗೆ ಔಷಧಿಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಸೇರಿದಂತೆ ಅನುಮೋದಿತ ಸರ್ಕಾರಿ ಆಸ್ಪತ್ರೆಯಿಂದ ವೈದ್ಯರ ಪ್ರಿಸ್ಕ್ರಿಪ್ಷನ್ ಹೊಂದಿರಬೇಕು. ಕೇವಲ 30 ದಿನಗಳವರೆಗಿನ ಔಷಧಿಗಳನ್ನು ಕೊಂಡೊಯ್ಯಬಹುದಾಗಿದೆ.
ಲಿರಿಕ, ಟ್ರಾಮಾಡಾಲ್, ಅಲ್ಪ್ರಜೋಲಮ್ (ಸನಾಕ್ಸ್), ಡಯಾಸ್ಪಮ್ (ವ್ಯಾಲಿಯಂ), ಸೋಲಾಮ್, ಕ್ಲೋನಾಜೆಪಮ್, ಸೋಲ್ಪೆಡಿಮ್, ಕೋಡೆನ್, ಮೆಥಡೋನ್ ಮತ್ತು ಪ್ರಿಗಾಬಾಲಿನ್ ಇವೆಲ್ಲವನ್ನೂ ಕತಾರ್‌ನಲ್ಲಿ ನಿಷೇಧಿಸಲಾಗಿದೆ.
ಸೈಕೋಟ್ರೋಪಿಕ್ ಮತ್ತು ಮಾದಕ ಪದಾರ್ಥಗಳನ್ನು ಹೊಂದಿರುವ ಔಷಧಗಳನ್ನು ಕತಾರ್‌ನಲ್ಲಿ ನಿಷೇಧಿಸಲಾಗಿದೆ.
ಕತಾರ್‌ನಲ್ಲಿ ನಿಷೇಧಿಸಲಾದ ಔಷಧಗಳ ವಿವರವಾದ ಪಟ್ಟಿ ಈ ಕೆಳಗಿನ ಲಿಂಕ್ನಲ್ಲಿದೆ
https://www.indianembassyqatar.gov.in/users/assets/pdf/innerpages/Substances-in-schedule.pdf
ಕತಾರ್‌ನಲ್ಲಿ ನಿಷೇಧಿತ ಔಷಧಗಳನ್ನು ತರುವವರು ಬಂಧನ ಮತ್ತು ಜೈಲು ಶಿಕ್ಷೆ ಸೇರಿದಂತೆ ಕಾನೂನು ಕ್ರಮಗಳನ್ನು ಎದುರಿಸಬೇಕಾಗಿರುವುದರಿಂದ ಪ್ರಯಾಣಿಕರು ಜಾಗರೂಕರಾಗಿರಬೇಕು.ಸ್ನೇಹಿತರು ಮತ್ತು ಕುಟುಂಬಕ್ಕೆ ಪ್ರಯಾಣಿಕರು ಔಷಧಿಗಳನ್ನು ತರಬೇಡಿ ಎಂದು ಭಾರತೀಯ ರಾಯಭಾರ ಕಚೇರಿಯು ನಿರ್ದೇಶಿಸಿದೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ