ಮಕ್ಕತುಲ್ ಮುಕರ್ರಮಃ : ಸೌದಿ ಹಜ್ ಮತ್ತು ಉಮ್ರಾ ಸಚಿವಾಲಯವು ಹೊಸ ಸೀಸನ್ ಗೆ ವಿದೇಶದಿಂದ ಹೆಚ್ಚಿನ ಉಮ್ರಾ ಯಾತ್ರಾರ್ಥಿಗಳನ್ನು ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಘೋಷಿಸಿದೆ.
ಕೋವಿಡ್‌ಗಿಂತ ಮುಂಚಿತವಾಗಿ ವಿವಿಧ ದೇಶಗಳೊಂದಿಗೆ ಒಪ್ಪಂದ ಮಾಡಲಾಗಿರುವ ಉಮ್ರಾ ಕೋಟಾದ ಅಡಿಯಲ್ಲಿ ಯಾತ್ರಾರ್ಥಿಗಳಿಗೆ ಪರವಾನಗಿ ನೀಡಲು ಸಚಿವಾಲಯ ಸಿದ್ಧತೆ ನಡೆಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಕೋವಿಡ್ ನಂತರ ಸೌದಿ ಅರೇಬಿಯಾ ಸಹಜ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಹಜ್ ಮತ್ತು ಉಮ್ರಾ ಸಚಿವಾಲಯವು ಈ ನಿರ್ಧಾರ ಕೈಗೊಂಡಿದೆ. ಹೊಸ ಋತುವಿನಲ್ಲಿ ವಿದೇಶಿ ಉಮ್ರಾ ಯಾತ್ರಾರ್ಥಿಗಳನ್ನು ಸ್ವೀಕರಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಹಜ್ ಮತ್ತು ಉಮ್ರಾ ಉಪ ಸಚಿವರು ಅಮರ್ ಅಲ್-ಮದ್ದಾ ತಿಳಿಸಿದ್ದಾರೆ.
ದೇಶೀಯ ಮತ್ತು ವಿದೇಶಿ ಯಾತ್ರಿಕರ ಮಾಹಿತಿಯನ್ನು ಕ್ರೋಡೀಕರಿಸಲು ಮತ್ತು ಸುಗಮವಾದ ಉಮ್ರಾವನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯದ ಅಡಿಯಲ್ಲಿ ಮೊಬೈಲ್ ಅಪ್ಲಿಕೇಶನ್‌ಗಳನ್ನು ಲಿಂಕ್ ಮಾಡಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವಾಲಯ ಹೇಳಿದೆ.
ಈ ಯೋಜನೆಯನ್ನು ಇಅ್ತಮರ್ನಾ ಮತ್ತು ಶೀರ್ ಆಪ್‌ಗಳನ್ನು ಸಂಪರ್ಕಿಸುವ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ವಿದೇಶದಿಂದ ಆಗಮಿಸುವ ಯಾತ್ರಾರ್ಥಿಗಳಿಗೆ ಸ್ಮಾರ್ಟ್ ಕಾರ್ಡ್ ನೀಡುವ ಮೂಲಕ ಯಾತ್ರೆ ಪುನರಾರಂಭಗೊಳ್ಳಲಿದೆ. ಪೈಲಟ್ ಯೋಜನೆಯು ಕಳೆದ ಹಜ್ ಋತುವಿನಲ್ಲಿ ಉತ್ತಮ ಯಶಸ್ಸನ್ನು ಕಂಡಿತು.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ