ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಇದರ ರಿವ್ಯೂ ಸಾಂಘಿಕ ಸಭೆಯು ಇಂದು ಸಂಜೆ 4.00ಗಂಟೆಗೆ ಡಿವಿಷನ್ ಅಧ್ಯಕ್ಷ ಹಾರಿಸ್ ಕುಕ್ಕುಡಿ ನೇತೃತ್ವದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಹಾಲ್‌ನಲ್ಲಿ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರು ನೆರವೇರಿಸಿದರು.
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಪ್ರ.ಕಾರ್ಯದರ್ಶಿ ತೌಫೀಕ್ ವೇಣೂರು ವರದಿಯನ್ನು ಹಾಗೂ ಕೋಶಾಧಿಕಾರಿ ಝಮೀರ್ ಸಅದಿ,ಲಾಯಿಲ ಲೆಕ್ಕಪತ್ರವನ್ನು ಮಂಡಿಸಿದರು.
ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ಸದಸ್ಯ, ಬೆಳ್ತಂಗಡಿ ಡಿವಿಷನ್ ಉಸ್ತುವಾರಿ ಮಸ್‌ಊದ್ ಸಅದಿ ತರಗತಿಯನ್ನು ಮಂಡಿಸಿದರು.
ಈ ಕಾರ್ಯಕ್ರಮದಲ್ಲಿ ತರ್ತೀಲ್ ಹೋಲಿ ಕುರ್‌ಆನ್ ಕಾರ್ಯಕ್ರಮದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸದಸ್ಯ, ದ.ಕ ಜಿಲ್ಲೆ ಈಸ್ಟ್ ಕೋಶಾಧಿಕಾರಿ ಎಂ.ಶರೀಫ್ ಬೆರ್ಕಳ, ಜಿಲ್ಲಾ ಸದಸ್ಯ ಇಕ್ಬಾಲ್ ಮಾಚಾರು,ಶರೀಫ್ ನಾವೂರು, ರಶೀದ್ ಮದನಿ ಹಾಗೂ ಬೆಳ್ತಂಗಡಿ ಡಿವಿಷನ್ ಸಮಿತಿ ಸದಸ್ಯರುಗಳು ಹಾಗೂ ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವ್ಯಾಪ್ತಿಯ ಎಲ್ಲಾ ಸೆಕ್ಟರ್ ಪದಾಧಿಕಾರಿಗಳು ಹಾಗೂ ಕೌನ್ಸಿಲರ್‌ಗಳು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ