ಮಂಗಳೂರು, ಸೆ.8 : ಕೇರಳದಲ್ಲಿ ಕೊರೋನ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ಬರುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಸಂಪೂರ್ಣವಾಗಿ ಎರಡು ತಿಂಗಳ ಕಾಲ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೇರಳಕ್ಕೆ ತೆರಳಲು ಉದ್ದೇಶಿಸಿರುವವರು ಕೂಡ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದ ವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಇದ್ಯಾದಿ ಎಲ್ಲ ರೀತಿಯ ಉದ್ಯೋಗದಾತರು ತಮ್ಮ ಕೇರಳ ಮೂಲದ ಸಿಬಂದಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕ್ಕೆ ಪ್ರವೇಶಿಸದಂತೆ ಸೂಚಿಸಿದ್ದಾರೆ. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದಿದ್ದಲ್ಲಿ ಅಕ್ಟೋಬರ್ ಅಂತ್ಯದ ವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್