ಎಸ್ಎಸ್ಎಫ್ ಕೊಡಗು ಜಿಲ್ಲಾ ಸಮಿತಿಯ ಅರ್ಧವಾರ್ಷಿಕ ಅವಲೋಕನ ಸಭೆಯು ರಿವ್ಯೂ ಹೆಸರಿನಲ್ಲಿ 13-09-2021 ಸೋಮವಾರದಂದು ನಾಪೋಕ್ಲುವಿನ ಅಲ್‌ಝೂಕ್ ರೆಸ್ಟೋರೆಂಟ್ ನಲ್ಲಿ ನಡೆಯಿತು.
ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ ಸೋಮವಾರಪೇಟೆಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಎಸ್ ವೈ ಎಸ್ ಜಿಲ್ಲಾಧ್ಯಕ್ಷರಾದ ಅಬ್ದುಲ್ಲಾ ಸಖಾಫಿ ಉದ್ಘಾಟನೆ ನಿರ್ವಹಿಸಿದರು.
ಜಿಲ್ಲೆಯ ಕೌನ್ಸಿಲರ್ಸ್‌ಗಳನ್ನು ಒಳಗೊಂಡ ಪ್ರಸ್ತುತ ಕಾರ್ಯಕ್ರಮವನ್ನು ರಾಜ್ಯ ಸಮಿತಿಯಿಂದ ವೀಕ್ಷಕರಾಗಿ ಆಗಮಿಸಿದ ಅಬ್ದುಲ್ ಹಕೀಮ್ ಬೆಂಗಳೂರುರವರು ಉಸ್ತುವಾರಿ ವಹಿಸಿಕೊಂಡರು ಹಾಗೂ ಪ್ರಧಾನ ಕಾರ್ಯದರ್ಶಿ ಮುಜೀಬ್ ಕೊಂಡಂಗೇರಿ ವರದಿ ವಾಚಿಸಿದಾಗ ಕೋಶಾಧಿಕಾರಿ ಲೆಕ್ಕಪತ್ರ ಮಂಡಿಸಿದರು.

ಪ್ರಸ್ತುತ ಕಾರ್ಯಕ್ರಮದಲ್ಲಿ ನವೆಂಬರ್ 20-21ರಂದು ಪಾಲಿಬೆಟ್ಟದ ಹುಂಡಿಯಲ್ಲಿ ನಡೆಯುವ ಪ್ರತಿಭೋತ್ಸವ ಕಾರ್ಯಕ್ರಮದ ದಿನಾಂಕ ಘೋಷಣೆಯನ್ನು ರಾಜ್ಯ ಸಮಿತಿಯ ಮಾಜಿ ಅಧ್ಯಕ್ಷರಾದ ಅಬ್ದುಲ್ ಹಫೀಳ್ ಸಅದಿ ನಿರ್ವಹಿಸಿದರು.
ಮೌಲಾನಾ ಕೆ ಎಂ ಅಬೂಬಕರ್ ಸಿದ್ದಿಕ್ ಮೋಂಟುಗೋಳಿ ರವರು ಸಂಘಟನಾ ತರಗತಿ ನಡೆಸಿಕೊಟ್ಟರು.ರಾಜ್ಯ ಸಮಿತಿ ನಾಯಕರಾದ ಮುಬಶ್ಶಿರ್ ಅಹ್ಸನಿ, ಸಫ್ವಾನ್ ಚಿಕ್ಕಮಗಳೂರು, ಶರೀಫ್ ಹೊಸತೋಟ
ಮುಂತಾದವರು ಅತಿಥಿಗಳಾಗಿ ಭಾಗವಹಿಸಿ ಹಿತವಚನವನ್ನು ನುಡಿದರು.
ಲಾಕ್ಡೌನ್ ಸಂದರ್ಭಗಳಲ್ಲಿ ನಡೆದ ಸುಮಾರು 34 ಆನ್ಲೈನ್ ಸ್ಪರ್ಧಾ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಜುನೈದ್ ನೆಲ್ಲಿಹುದಿಕೇರಿ ಸ್ವಾಗತಿಸಿ ಇಬ್ರಾಹಿಂ ಮಾಸ್ಟರ್ ಕಾರ್ಯಕ್ರಮವನ್ನು ನಿರೂಪಿಸಿದರು.ಅಷ್ಕರ್ ಸಖಾಫಿ ಕೊಟ್ಟಮುಡಿ ವಂದನಾರ್ಪಣೆಗೈದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ