ಬೆಂಗಳೂರು. 14 ಸೆ: ಕರ್ನಾಟಕದಲ್ಲಿ ಜಾರಿಗೊಳಿಸಿದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ ವ್ಯಕ್ತಪಡಿಸಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ಈ ನೀತಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ , ಪ್ರತಿಭಟಿಸಿದರು.

ಕ್ಯಾಂಪಸ್ ಫ್ರಂಟ್ ರಾಜ್ಯ ಪ್ರ.ಕಾರ್ಯದರ್ಶಿ ಅನೀಸ್ ಕುಂಬ್ರ ಮಾತನಾಡಿ ಮೂರು ದಶಕಗಳ ನಂತರ ಜಾರಿಗೊಳಿಸಲು ಉದ್ದೇಶಿಸಿರುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಹೊಸ ಬದಲಾವಣೆಯ ನಿರೀಕ್ಷೆಯಲ್ಲಿದ್ದರು, ಆದರೆ ಈ ನಿರೀಕ್ಷೆಗೆ ತದ್ವಿರುದ್ದವಾಗಿ ವಾಸ್ತವ್ಯತೆಯಿಲ್ಲದ ಜನರನ್ನು ಕನಸಿನ ಲೋಕದಲ್ಲಿ ತೇಲಾಡಿಸುವ ಅಸಮರ್ಪಕ ಹಾಗೂ ಅವೈಜ್ಞಾನಿಕವಾದ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗುವ ರೀತಿಯಲ್ಲಿ ಕ್ಯಾಬಿನೆಟ್ ಸಭೆ ಕರೆದು ಲೋಕಸಭೆಯಲ್ಲಾಗಲಿ, ವಿಧಾನಸಭೆಯಲ್ಲಾಗಲಿ ಚರ್ಚೆಗೆ ಒಳಪಡಿಸದೆ ಹಿಂಬದಿ ಬಾಗಿಲಿನ ಮುಖಾಂತರ ಜಾರಿಗೊಳಿಸಿರುವುದರ ಹಿಂದಿರುವ ದುರುದ್ದೇಶವನ್ನು ಕ್ಯಾಂಪಸ್ ಫ್ರಂಟ್ ಅರಿತಿದೆ.ಈ ನೀತಿಯು ಶಿಕ್ಷಣವನ್ನು ಕೇಂದ್ರೀಕರಿಸುವುದರೊಂದಿಗೆ ಖಾಸಗೀಕರಣಕ್ಕೆ ಒತ್ತು ನೀಡುವ ಹಾಗೂ ಶಿಕ್ಷಣವನ್ನು ಕೇಸರೀಕರಣಗೊಳಿಸುವ ಹುನ್ನಾರಹೊಂದಿದೆ.

2016 ರಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸುಗೊಳಿಸಿದ ಸುಬ್ರಮಣ್ಯಂ ನೇತೃತ್ವದ ಸಮಿತಿಯ ವರದಿಯನ್ನು ಯಾಕಾಗಿ ಸಾರ್ವಜನಿಕಗೊಳಿಸಲಿಲ್ಲ ಹಾಗೂ ಅವರ ವರದಿಯ ಅಭಿಪ್ರಾಯಗಳನ್ನು ಯಾಕಾಗಿ ಪರಿಗಣಿಸಲಿಲ್ಲ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ , ತದನಂತರ ಕಸ್ತೂರಿ ರಂಗನ್ ರವರ ನೇತೃತ್ವದಲ್ಲಿ ರೂಪಿಸಲಾದ ನೀತಿಯಲ್ಲಿರುವ ತೊಡಕುಗಳ ಕುರಿತು 2019 ರಲ್ಲಿಯೇ ಕ್ಯಾಂಪಸ್ ಫ್ರಂಟ್ ವಿರೋಧ ವ್ಯಕ್ತಪಡಿಸಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃಧ್ದಿ ಸಚಿವಾಲಯಕ್ಕೆ ಶಿಫಾರಸ್ಸು ವರದಿ ನೀಡಿತ್ತು. ಆದರೆ ನಮ್ಮ ಹಾಗೂ ಹಲವಾರು ಶಿಕ್ಷಣ ತಜ್ಞರು ನೀಡಿದ ಯಾವ ಅಭಿಪ್ರಾಯಗಳನ್ನು ಸಹ ಪರಿಗಣಿಸದೆ ಸರ್ವಾಧಿಕಾರಿಯಾಗಿ ಕೈಗೊಂಡ ತೀರ್ಮಾನವಾಗಿದೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ, ಇದನ್ನು ಒಪ್ಪಲು ಖಂಡಿತ ಸಾಧ್ಯವಿಲ್ಲವೆಂದರು.

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ – ಆಸ್ಪತ್ರೆಗೆ ದಾಖಲು
ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಿ ಪೋಲಿಸ್ ದೌರ್ಜನ್ಯ ಎಸಗಿದ್ದಾರೆ. ಹಲವಾರು ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಗಾಯಗಳಾಗಿದ್ದು ಹಲವು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಪ್ರ. ಕಾರ್ಯದರ್ಶಿ ಅನೀಸ್ ಕುಂಬ್ರ, ಕಾರ್ಯದರ್ಶಿ ಸರ್ಫರಾಝ್ ಗಂಗಾವತಿ, ರಾಜ್ಯ ಸಮಿತಿ ಸದಸ್ಯೆ ಮುರ್ಶಿದಾ ಮಂಗಳೂರು, ಬೆಂಗಳೂರು ಜಿಲ್ಲಾಧ್ಯಕ್ಷ ಆಕಿಬ್ ಬೆಂಗಳೂರು ಹಾಗೂ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ