ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಎಸ್ಸೆಸ್ಸೆಪ್ ಧ್ವಜ ದಿನದ ಪ್ರಯುಕ್ತ ಸಂಘಟನೆಗೆ ನಾಯಕತ್ವ ನೀಡಿ ಸಂಘಟನೆಯನ್ನು ಕಟ್ಟಿ ಬೆಳೆಸಿದ ಪೂರ್ವಿಕರು ನಾಯಕರು ಹಾಗೂ ನವ ನಾಯಕರ ಸಮಾಗಮ ರೂಟ್ ಅಪ್ ರೂಟ್ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗರವರ ಅಧ್ಯಕ್ಷತೆಯಲ್ಲಿ ಅಲ್ ಮದೀನಾ ಮಂಜನಾಡಿಯಲ್ಲಿ ನಡೆಯಿತು.ಕರ್ನಾಟಕ ರಾಜ್ಯ ಜಂಇಯ್ಯತುಲ್ ಉಲಮಾ ಕೋಶಾಧಿಕಾರಿ ಹುಸೈನ್ ಸಅದಿ ಕೆ.ಸಿ.ರೋಡ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಪಿ,ಇಶಾರ ಪತ್ರಿಕೆಯ ಪ್ರಧಾನ ಸಂಪಾದಕ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, ಎಸ್.ಎಂ.ಎ ರಾಜ್ಯಾಧ್ಯಕ್ಷ ಕೆ.ಕೆ.ಎಂ ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ ಸುರಿಬೈಲು,ಹಸೈನಾರ್ ಆನೆಮಹಲ್,ಮಹಮ್ಮದ್ ಮದನಿ ಸಾಮಣಿಗೆ,ಇಸ್ಮಾಯಿಲ್ ಸಅದಿ ಕಿನ್ಯ, ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್,ಅಬೂಬಕ್ಕರ್ ಸಖಾಫಿ ಬಾಳೆಪುಣಿ,ಮಹಮ್ಮದ್ ಕುಂಞಿ ಉಪ್ಪಿನಂಗಡಿ,ಬಿ.ಎ ಇಬ್ರಹಿಂ ಸಖಾಫಿ ದಾವಣಗೆರೆ,ಬಶೀರ್ ಜಿ.ಕೆರೆ,ಇಸ್ಮಾಯಿಲ್ ಮಾಸ್ಟರ್ ಮಂಗಿಲಪದವು ಮೊದಲಾದ ಸಂಘಟನಾ ಕಾರ್ಯಾಚರಣೆಯ ಸಮಯದ ಅನುಭವಗಳನ್ನು ಹಂಚಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಪ್ ರಾಜ್ಯ ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ, ರಾಜ್ಯ ಕಾರ್ಯದರ್ಶಿ ಎನ್.ಸಿ ರಹೀಂ,ನಾಯಕರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ,ಮಹಮ್ಮದಲಿ ತುರ್ಕಳಿಕೆ ಮೊದಲಾದವರು ಉಪಸ್ಥಿತರಿದ್ದರು.ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿದರು.ಕಾರ್ಯದರ್ಶಿ ಕೆ.ಎಂ ಮುಸ್ತಫಾ ನ ಈಮಿ ಕಾರ್ಯಕ್ರಮ ನಿರೂಪಿಸಿದರ.ಕಾರ್ಯದರ್ಶಿ ಹುಸೈನ್ ಸಅದಿ ಹೊಸ್ಮಾರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ